ಗೋಕಾಕ:ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ

ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ
ಗೋಕಾಕ ಫೆ 19 : ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ, ಕರ್ನಾಟಕ ರಕ್ಷಣಾ ವೇಳೆ ಗೋಕಾಕ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರದಂದು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದರು.
ಸಂದರ್ಭದಲ್ಲಿ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಮಾತನಾಡಿ ಗ್ರಾಮೀಣ ಭಾಗದ ರೈತರಿಗೆ ಬೇಕಾದ ಎಲ್ಲ ಪ್ರಮಾಣಪತ್ರಗಳು ಸೇರಿದಂತೆ ಭೂಮಿಗೆ ಸಂಬಂಧಪಟ್ಟ ಸೇವೆಗಳನ್ನು ಮನೆ ಬಾಗಿಲಿಗೆ ಹೋಗಿ ಸ್ಪಂದಿಸುವ ಮೂಲಕ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಇವರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಎರಡನೇ ಬಾರಿ ಮುಷ್ಕರ ಕೈಗೊಂಡಿರುವುದು ಬೇಸರದ ಸಂಗತಿ. ಕೂಡಲೇ ಸಮಸ್ಯೆಗಳನ್ನು ಸರ್ಕಾರ ಶೀಘ್ರ ಬಗೆಹರಿಸಬೇಕು. ಗುಣಮಟ್ಟದ ಮೊಬೈಲ್, ಲ್ಯಾಪ್‌ಟಾಪ್, ಇಂಟರ್‌ನೆಟ್ ವ್ಯವಸ್ಥೆ, ಕಚೇರಿಗೆ ಪೀಠೋಪಕರಣಗಳ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳು ಅಗತ್ಯವಾಗಿದೆ. ಈ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ದಿಲಾವರ ದೇಸಾಯಿ, ಉಪಾಧ್ಯಕ್ಷ ಪಿ.ಜಿ.ಜಾರಿಮರದ, ಪ್ರಧಾನ ಕಾರ್ಯದರ್ಶಿ ವ್ಹಿ. ಪಿ.ಗಾಯದ, ಎಸ್.ಬಿ.ಪಾಶ್ಚಾಪೂರ, ಕರವೇ ಮುಖಂಡರುಗಳಾದ ಸಾದಿಕ ಹಲ್ಯಾಳ, ಪಪ್ಪು ಹಂದಿಗುಂದ,ಅಶೋಕ್ ಬಂಡಿವಡ್ಡರ, ರಾಜು ಕೆಂಚನಗುಡ್ಡ, ಅಬ್ಬು ಮುಜಾವರ, ರಮಜಾನ ಅಂಡಗಿ , ಗುರು ಮುನ್ನೋಳಿಮಠ, ಸುಂದರ ಪೂಜೇರಿ, ಜಿ.ಎಸ್.ಸಸಾಲಟ್ಟಿ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.