RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಕಾಲುವೆಗಳಿಗೆ ದಿ.21 ರಿಂದ 20 ದಿನಗಳವರೆಗೆ ನೀರು ಹರಿಸಲಲಾಗುವುದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಕಾಲುವೆಗಳಿಗೆ ದಿ.21 ರಿಂದ 20 ದಿನಗಳವರೆಗೆ ನೀರು ಹರಿಸಲಲಾಗುವುದು : ಶಾಸಕ ಬಾಲಚಂದ್ರ ಜಾರಕಿಹೊಳಿ 

ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಕಾಲುವೆಗಳಿಗೆ ದಿ.21 ರಿಂದ 20 ದಿನಗಳವರೆಗೆ ನೀರು ಹರಿಸಲಲಾಗುವುದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ನ 19 : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ಮಂಗಳವಾರ ದಿ.21 ರಿಂದ 20 ದಿನಗಳವರೆಗೆ ನೀರನ್ನು ಹರಿಸಲಾಗುವುದು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಈಗಾಗಲೇ ಹಿಡಕಲ್ ಜಲಾಶಯದಲ್ಲಿ 46.27 ಟಿಮ್ಮಎಂಸಿ ನೀರು ಸಂಗ್ರಹವಿದ್ದು, ನವ್ಹೆಂಬರ 21 ರ ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 10 ರವರೆಗೆ ಜಿಎಲ್‍ಬಿಸಿ 2400 ಕ್ಯೂಸೆಕ್ಸ್, ಜಿಆರ್‍ಬಿಸಿ 2000 ಕ್ಯೂಸೆಕ್ಸ್ ಹಾಗೂ ಸಿಬಿಸಿ ಕಾಲುವೆಗೆ 500 ಕ್ಯೂಸೆಕ್ಸ್ ನೀರನ್ನು ದಿನಂಪ್ರತಿ ಹರಿಸಲಾಗುವುದು. ಒಟ್ಟು 9.50 ಟಿಎಂಸಿ ನೀರನ್ನು ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.
ಕೃಷಿ ಬೆಳೆಗಳಿಗೆ ನೀರನ್ನು ಹರಿಸಲಾಗುತ್ತಿದ್ದು, ರೈತರು ಇದರ ಪ್ರಯೋಜನ ಪಡೆಯುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದ್ದಾರೆ. ರೈತರ ಮನವಿ ಮೇರೆಗೆ ನೀರನ್ನು ಹರಿಸಲು ತೀರ್ಮಾನ ಕೈಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಅಭಿನಂದಿಸಿದ್ದಾರೆ.
ಯಶಸ್ವಿಯಾದ ಪರಿವರ್ತನಾ ಯಾತ್ರೆ : ಮೂಡಲಗಿಯಲ್ಲಿ ಶನಿವಾರದಂದು ಜರುಗಿದ ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿ ಅರಭಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಪರಿವರ್ತನಾ ಯಾತ್ರೆಯಲ್ಲಿ ಕ್ಷೇತ್ರದ 50 ಸಹಸ್ರಕ್ಕೂ ಮೀರಿದ ಜನರು ಆಗಮಿಸಿ ಬಿಜೆಪಿಗೆ ಶಕ್ತಿ ನೀಡಿದ್ದಾರೆ. ಅದರಲ್ಲೂ ಅಪಾರ ಸಂಖ್ಯೆಯಲ್ಲಿ ರೈತರು, ಮಹಿಳೆಯರು ಭಾಗವಹಿಸಿ ಹೊಸ ಚೈತನ್ಯ ಕೊಟ್ಟಿದ್ದಾರೆ. ಸಮಸ್ತ ಕ್ಷೇತ್ರದ ಜನತೆಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದ್ದಾರೆ. ಈ ಯಾತ್ರೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

Related posts: