RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜಿಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ: ಶಾಸಕ ಬಾಲಚಂದ್ರ

ಗೋಕಾಕ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜಿಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ: ಶಾಸಕ ಬಾಲಚಂದ್ರ 

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜಿಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ: ಶಾಸಕ ಬಾಲಚಂದ್ರ
ಗೋಕಾಕ ಡಿ 18: ಗುಜರಾತ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ವ್ಯಾಪಕ ಅಲೆ ಬೀಸುತ್ತಿದ್ದು, ರಾಜ್ಯದಲ್ಲಿಯೂ ಸಹ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಹಾಗೂ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇರುವದರಿಂದ ಬಿಜೆಪಿ ಗೆಲುವಿಗೆ ಅನುಕೂಲವಾಗಲಿದೆ. ಗುಜರಾತ ಹಾಗೂ ಹಿಮಾಚಲ ಪ್ರದೇಶದ ಚುನಾವಣೆ ಈ ರಾಜ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಉಭಯ ರಾಜ್ಯಗಳ ಚುನಾವಣೆಯ ಜವಾಬ್ದಾರಿ ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮೀತ ಶಾ ಅವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದ್ದಾರೆ.

Related posts: