ಗೋಕಾಕ:ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ
ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ
ಗೋಕಾಕ ಡಿ 20: ನಿಯೋಜಿತ ಗೋಕಾಕ ಜಿಲ್ಲಾ ಚಾಲನಾ ಸಮಿತಿ ಹಾಗೂ ಗೋಕಾಕ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಬುಧವಾರದಂದು ಗೋಕಾಕ ಜಿಲ್ಲಾ ರಚನೆಗೆ ಆಗ್ರಹಿಸಿ ನಡೆದ ಸಾಂಕೇತಿಕ ಧರಣಿಯಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ. ಗೋಕಾಕ ಜಿಲ್ಲಾ ರಚನೆಗೆ ನಮ್ಮ ಸಂಪೂರ್ಣ ಬೆಂಬಲ ಹೋರಾಟ ಸಮೀತಿಯವರಿಗೆ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಗೋಕಾಕ ಜಿಲ್ಲೆ ಆಗಬೇಕೆಂಬುದು ಪ್ರತಿಯೊಬ್ಬ ನಾಗರೀಕನ ಆಶಯವಾಗಿದೆ. ಜಿಲ್ಲೆಗಾಗಿ ಕಳೆದ ಎರಡು ದಶಕದಿಂದ ಹೋರಾಟ ನಡೆಯುತ್ತಿದೆ. ನಾಳೆ ದಿ. 21 ರಂದು ಗೋಕಾಕ ನಗರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಮಿಸುತ್ತಿರುವುದರಿಂದ ಪಕ್ಷಾತೀತವಾಗಿ ಗೋಕಾಕ ಜಿಲ್ಲೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು. ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ನ್ಯಾಯವಾದಿಗಳ ಸಂಘವು ಸೇರಿದಂತೆ ತಾಲೂಕಿನ ಎಲ್ಲ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಎಲ್ಲ ಚುನಾಯಿತ ಪ್ರತಿನಿಧಿಗಳು ಸೇರಿ ಪಕ್ಷಾತೀತವಾಗಿ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಗುವುದು. ಗೋಕಾಕ ಜಿಲ್ಲೆಗಾಗಿ ಎಂತಹ ಹೋರಾಟಕ್ಕೂ ಸಿದ್ಧರಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.