ಗೋಕಾಕ:ಪ್ರಧಾನ ಮಂತ್ರಿ ಉಜ್ವಲ ಯೋಜನೆ ಸದುಪಯೋಗ ಪಡೆದುಕೊಳ್ಳಿ : ಗೋವಿಂದ ಕೊಪ್ಪದ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಸದುಪಯೋಗ ಪಡೆದುಕೊಳ್ಳಿ : ಗೋವಿಂದ ಕೊಪ್ಪದ
ಗೋಕಾಕ ಜ 4 : ಪರಿಸರ ಸಂರಕ್ಷಣೆ ಹಾಗೂ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ದೇಶದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲೆಂಡರ್ ನೀಡುವಲ್ಲಿ ಮಹತ್ತರ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.
ಇವರು ಸಮೀಪದ ಯಾದವಾಡ ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಯಾದವಾಡ ಜಿ.ಪಂ ವ್ಯಾಪ್ತಿಯ ಗ್ರಾಮಗಳ ಫಲಾನುಭವಿಗಳಿಗೆ ಉಚಿತ ಗ್ಯಾಸ ಸಿಲೆಂಡರ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಥಳಿಯ ಗ್ರಾ.ಪಂ. ಅಧ್ಯಕ್ಷ ಯಲ್ಲಪ್ಪಗೌಡ ನ್ಯಾಮಗೌಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಶಂಕರ ಬೆಳಗಲಿ, ಶ್ರೀಶೈಲ ಢವಳೆಶ್ವರ, ಭೀರಪ್ಪ ಮುಗಳಖೋಡ, ವೀರಣ್ಣ ಮೋಡಿ, ಕಲ್ಮೇಶ ಗಾಣಿಗೇರ, ಹನೀಪ ಬನಹಟ್ಟಿ ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಗ್ರಾಮಸ್ಥರು ಇದ್ದರು.