ಘಟಪ್ರಭಾ:ನಾಳೆ ತಳಕಟನಾಳ ಗ್ರಾಮದಲ್ಲಿ ರಾಜ್ಯ ಮಟ್ಟದ ಜಾನಪದ ಸಾಂಸ್ಕಂತಿಕ ಕಲಾ ವೈಭವ
ನಾಳೆ ತಳಕಟನಾಳ ಗ್ರಾಮದಲ್ಲಿ ರಾಜ್ಯ ಮಟ್ಟದ ಜಾನಪದ ಸಾಂಸ್ಕಂತಿಕ ಕಲಾ ವೈಭವ
ಘಟಪ್ರಭಾ ಫೆ 3 : ಸ್ಥಳೀಯ ಗುರು ಪುಟ್ಟರಾಜ ರಂಗಭೂಮಿ ಸಾಂಸ್ಕಂತಿ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕಂತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಸಿದ್ಧಾರೂಢ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ರಾಜ್ಯ ಮಟ್ಟದ ಜಾನಪದ ಸಾಂಸ್ಕಂತಿಕ ಕಲಾ ವೈಭವ ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭ ದಿ.04 ರಂದು ಸಮೀಪದ ತಳಕಟನಾಳ ಗ್ರಾಮದ ಶ್ರೀ ಸಿದ್ಧಾರೂಢ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾರಂಭದ ಸಾನಿಧ್ಯವನ್ನು ಶ್ರೀ ಸಿದ್ಧಾರೂಢ ಮಠದ ಶ್ರೀ ಆತ್ಮಾನಂದ ಮಹಾಸ್ವಾಮಿಗಳು ಹಾಗೂ ರಾಜ ವಿದ್ಯಾಶ್ರಮ ಹುಬ್ಬಳ್ಳಿಯ ಶ್ರೀ ಷಡಕ್ಷರಿ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಗೋಕಾಕದ ಹಿರಿಯ ಕಲಾವಿದರಾದ ಬಸವರಾಜ ಹಿರೇಮಠ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ರಾಜೇಂದ್ರ ಸಣ್ಣಕ್ಕಿ, ಜಿ.ಪಂ ಸದಸ್ಯೆ ಶಕುಂತಲಾ ಪರುಶೇಟ್ಟಿ, ತಾ.ಪಂ ಸದಸ್ಯ ಲಕ್ಷ್ಮಣ ಮಸಗುಪ್ಪಿ, ಗ್ರಾ.ಪಂ ಅಧ್ಯಕ್ಷ ಕೆಂಪಣ್ಣಾ ಬೆಣ್ಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಳಗಾವಿಯ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.