ಖಾನಾಪುರ:ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಡಿಸಿ ಕಛೇರಿ ಎದುರು ರೈತರ ಪ್ರತಿಭಟನೆ: ಅಶೋಕ ಯಮಕನಮರಡಿ
ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಡಿಸಿ ಕಛೇರಿ ಎದುರು ರೈತರ ಪ್ರತಿಭಟನೆ: ಅಶೋಕ ಯಮಕನಮರಡಿ
ಖಾನಾಪುರ ಜು.7 : ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬರುವ ೯ನೇ ಜುಲೈ ಸೋಮವಾರದಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಹಾಗೂ ರೈತರಿಂದ ಬೆಳಗಾವಿಯ ಡಿಸಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಶನಿವಾರದಂದು ಬೀಡಿ ಗ್ರಾಮದ ಪ್ರವಾಸಿ ಮಂದಿರದಲ್ಲಿ ರೈತಮುಖಂಡ ಅಶೋಕ ಯಮಕನಮರಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದ ರೈತರು ಭೀಕರ ಬರಗಾಲದಿಂದ ಕಂಗೆಟ್ಟಿದ್ದು, ಸುಮಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ಸಿಎಂ ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಹೇಳಿರುವ ಪ್ರಕಾರ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ರೈತರ ಕಬ್ಬಿನ ಬಾಕಿ ಬಿಲ್ಲನ್ನು ನೀಡಬೇಕೆಂದು ಆಗ್ರಹಿಸಿ ಬರುವ ಜುಲೈ ೦೯ನೇ ಸೋಮವಾರದಂದು ಬೆಳಗಾವಿಯ ಡಿಸಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಈ ಸಂಧರ್ಭದಲ್ಲಿ ರೈತ ಮುಖಂಡರಾದ ರಾಘವೇಂದ್ರ ನಾಯಿಕ, ಗುರುಲಿಂಗಯ್ಯಾ ಪೂಜಾರ ಇತರರು ಹಾಜರಿದ್ದರು.
ವರದಿ : ಕಾಶಿಮ ಹಟ್ಟಹೋಳಿ