ಗೋಕಾಕ:ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಿದ ಸಚಿವ ರಮೇಶ
ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಿದ ಸಚಿವ ರಮೇಶ
ಗೋಕಾಕ ಜು 16 : ವಿಕಲಚೇತನ ಮಕ್ಕಳಿಗಾಗಿ ಸರ್ಕಾರ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಪಾಲಕರು ಅವುಗಳ ಸದುಪಯೋಗದಿಂದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವಂತೆ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು ಸೋಮವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯಗಳಿಂದ ಹಮ್ಮಿಕೊಂಡ ಗೋಕಾಕ ವಲಯದ 2017-18ನೇ ಸಾಲಿನ ವಿಕಲಚೇತನ ಮಕ್ಕಳ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್.ಕುಲಕರ್ಣಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ಪಾಟೀಲ, ಸಂಯೋಜಕ ಎಸ್.ಬಿ.ಕೊಂತಿ ಸೇರಿದಂತೆ ಇತರರು ಇದ್ದರು.