ಗೋಕಾಕ:ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ
ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ
ಗೋಕಾಕ ಅ 15 : ನಾಗರ ಹುತ್ತಕ್ಕೆ ಹಾಲೆರೆಯುವುದಕಿಂತ ಬಡ ಮಕ್ಕಳಿಗೆ ನೀಡಿದರೆ ಮಕ್ಕಳಿಗೆ ಪೌಷ್ಠಿಕವಾದ ಆಹಾರವಾಗಿರುತ್ತದೆ ಎಂದು ಮೆಳವಂಕಿ ಬಸವ ನಗರದ ಶ್ರೀ ಬಸವೇಶ್ವರ ಜನಕಲ್ಯಾಣ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷರು ಹಾಗೂ ಇಲ್ಲಿಯ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು.
ಅವರು ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದ ಬಸವ ನಗರದ ಸರ್ಕಾರಿ ಕಿರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶ್ರೀ ಬಸವೇಶ್ವರ ಜನ ಕಲ್ಯಾಣ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ನಾಗ ಪಂಚಮಿ ನಿಮಿತ್ಯ ಶಾಲಾ ಮಕ್ಕಳಿಗೆ ಹಾಲನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳನ್ನು ಶೈಕ್ಷಣಿಕ ಅಭಿವೃದ್ದಿ ಹೊಂದಬೇಕು. ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಜನ ಕಲ್ಯಾಣ ಪ್ರತಿಷ್ಠಾನ ಟ್ರಸ್ಟ್ ಉಪಾಧ್ಯಕ್ಷ ನಾಗರಾಜ ಅಡಿಬಟ್ಟಿ, ಗ್ರಾ.ಪಂ ಅಧ್ಯಕ್ಷ ರಾಮಪ್ಪ ಕಾಪಸಿ, ಗ್ರಾಮ ಪಂಚಾಯತ ಸದಸ್ಯರಾದ ಭೀಮಶಿ ಹಡಗಿನಾಳ, ಅಡಿವೆಪ್ಪ ಕಾಪಸಿ ಹಾಗೂ ಟ್ರಸ್ಟ್ ಸದಸ್ಯರಾದ ಬಸವರಾಜ ಪಾಟೀಲ, ಮಲ್ಲಪ್ಪ ಕಾಪಸಿ, ಈರಪ್ಪ ಅಡಿಬಟ್ಟಿ, ಸರ್ವ ಸದಸ್ಯರು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.