ಗೋಕಾಕ:ಪರಿಸರ ಸಂರಕ್ಷಣೆ ಎಲ್ಲರ ಹೊಣೆ : ಶಿವಲಿಂಗಪ್ಪ ಬಳಿಗಾರ
ಪರಿಸರ ಸಂರಕ್ಷಣೆ ಎಲ್ಲರ ಹೊಣೆ : ಶಿವಲಿಂಗಪ್ಪ ಬಳಿಗಾರ
ಗೋಕಾಕ ಅ 18 : ಪರಿಸರ ಸಂರಕ್ಷಣೆ ಎಲ್ಲರ ಹೊಣೆ ಎಂದು ಗ್ರಾ.ಪಂ ಅಧ್ಯಕ್ಷ ಶಿವಲಿಂಗಪ್ಪ ಬಳಿಗಾರ ಹೇಳಿದರು.
ಅವರು ತಾಲೂಕಿನ ಗೋಸಬಾಳ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ಯ ಗ್ರಾಮಸ್ಥರಿಗೆ ಉಚಿತವಾಗಿ ಸಸಿಗಳನ್ನು ವಿತರಿಸಿ ಮಾತನಾಡಿದರು.
ಕಾಡು ಬೆಳೆಸಿ ನಾಡು ಉಳಿಸಿ ಎಂಬಂತೆ ಮನೆಗೊಂದು ಮರ ಊರಿಗೊಂಡು ವನ ಎಂಬುದರ ಬಗ್ಗೆ ಗ್ರಾಮಸ್ಥರಲ್ಲಿ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯ ಗ್ರಾಮ ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರಲ್ಲದೇ ಪರಿಸರ ಸಂರಕ್ಷಣೆಯಿಂದ ನಾಡು ಸಮೃದ್ಧಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು.