RNI NO. KARKAN/2006/27779|Friday, January 10, 2025
You are here: Home » breaking news » ಘಟಪ್ರಭಾ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ

ಘಟಪ್ರಭಾ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ 

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ

ಘಟಪ್ರಭಾ ಸೆ 11 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಕ್ಕರೆ ಕಾರ್ಖಾನೆಯ ಕಾರ್ಯಾಲಯದಲ್ಲಿ ಮಂಗಳವಾರದಂದು ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಉಭಯತರು ಅವಿರೋಧವಾಗಿ ಆಯ್ಕೆಯಾದರೆಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ತಹಶೀಲ್ದಾರ ಜಿ.ಎಸ್. ಮಳಗಿ ಅವರು ಪ್ರಕಟಿಸಿದರು.
ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಅಶೋಕ ಪಾಟೀಲ ಅವರು, ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು. ಈ ಭಾಗದ ಶಕ್ತಿಯಾಗಿರುವ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಖ್ಯಾತ ಉದ್ಯಮಿ ಲಖನ್ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಕಾರ್ಖಾನೆಯ ಒಳತಿಗಾಗಿ ದುಡಿದು ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರೈತರ ಸಹಕಾರವು ಸದಾ ಕಾರ್ಖಾನೆಯ ಮೇಲಿರಲಿ ಎಂದು ಹೇಳಿದರು.
ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಶಿದ್ಲಿಂಗ ಕಂಬಳಿ, ಲಕ್ಷ್ಮಣ ಗಣಪ್ಪಗೋಳ, ಗಿರೀಶ ಹಳ್ಳೂರ, ಶಿವಲಿಂಗ ಪೂಜೇರಿ, ಭೂತಪ್ಪ ಗೋಡೇರ, ಎಂ.ಆರ್.ಭೋವಿ, ಮಾಳಪ್ಪ ಜಾಗನೂರ, ಮಲ್ಲಿಕಾರ್ಜುನ ಕಬ್ಬೂರ, ಲಕ್ಕವ್ವ ಬೆಳಗಲಿ, ಯಲ್ಲವ್ವ ಸಾರಾಪೂರ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ವರ್ತಕ ವಿಕ್ರಮ ಅಂಗಡಿ, ಅರ್ಬನ್ ಬ್ಯಾಂಕ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಕಬ್ಬು ಅಭಿವೃದ್ಧಿ ಅಧಿಕಾರಿ ಜೆ.ಆರ್. ಬಬಲೇಶ್ವರ ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
ತಹಶೀಲ್ದಾರ ಜಿ.ಎಸ್. ಮಳಗಿ ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.

Related posts: