ಗೋಕಾಕ:ಸರ್ಕಾರ ಪ್ಲಾಸ್ಟಿಕ್ ನಿಷೇಧಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಿದೆ : ಸೋಮಶೇಖರ ಮಗದುಮ್ಮ
ಸರ್ಕಾರ ಪ್ಲಾಸ್ಟಿಕ್ ನಿಷೇಧಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಿದೆ : ಸೋಮಶೇಖರ ಮಗದುಮ್ಮ
ಗೋಕಾಕ ಸೆ 30 : ಪ್ಲಾಸ್ಟಿಕ್ ಬಳಕೆಯಿಂದಾಗಿ ನಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿರುವುದರಿಂದ ಇಂದು ಸರ್ಕಾರ ಪ್ಲಾಸ್ಟಿಕ್ ನಿಷೇಧಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಿದ್ದು ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಧರ್ಮಸ್ಥಳ ಜನ ಜಾಗೃತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸೋಮಶೇಖರ ಮಗದುಮ್ಮ ಹೇಳಿದರು.
ನಗರದ ಸಮುದಾಯ ಭವನದಲ್ಲಿ ಜರುಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸದಡಿ ಪ್ಲಾಸ್ಟಿಕ್ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ಜಾಗೃತರಾಗಿ ಸ್ವಯಂ ಪ್ರೇರಿತರಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಮುಂದಾಗಬೇಕು. ಈ ಕಾರ್ಯದಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದ್ದು, ಮಾರುಕಟ್ಟೆಗೆ ಬಟ್ಟೆಯ ಕೈ ಚೀಲಗಳನ್ನು ಬಳಸುವುದರಿಂದ ಪ್ಲಾಸ್ಟಿಕ್ ನಿಷೇಧ ಪರಿಣಾಮಕಾರಿಯಾಗಿ ಜಾರಿಯಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯ ಪ್ರಕಾಶ ಮುರಾರಿ, ಕಾರ್ಯನಿರ್ವಾಹಕ ಅಭಿಯಂತರ ವಿ.ಎಸ್.ತಡಸಲೂರು, ಮುಖಂಡರಾದ ಜ್ಯೋತಿಭಾ ಸುಭಂಜಿ, ಶಿವಾಜಿ ಕಲ್ಲೋಳಿ, ಯೋಜನಾಧಿಕಾರಿ ಸುರೇಂದ್ರಕುಮಾರ, ವಲಯ ಮೇಲ್ವಿಚಾರಕ ಸಂಕುಶಗೌಡ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುರೇಖಾ ಎಸ್. ಸೇವಾ ಪ್ರತಿನಿಧಿಗಳಾದ ಪ್ರಭಾವತಿ, ಲಕ್ಷ್ಮೀ, ಭಾರತಿ, ಉಮಾ ಇದ್ದರು.