ಗೋಕಾಕ:ಗ್ರಾಮದ ಸರ್ವಾಂಗೀಣ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿಯಾಗಿದೆ : ಶಿವಲಿಂಗಪ್ಪ ಬಳಿಗಾರ
ಗ್ರಾಮದ ಸರ್ವಾಂಗೀಣ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿಯಾಗಿದೆ : ಶಿವಲಿಂಗಪ್ಪ ಬಳಿಗಾರ
ಗೋಕಾಕ ಅ 4 : ಗ್ರಾಮದ ಸರ್ವಾಂಗೀಣ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಗ್ರಾ. ಪಂ. ಅಧ್ಯಕ್ಷ ಶಿವಲಿಂಗಪ್ಪ ಬಳಿಗಾರ ಹೇಳಿದರು.
ಅವರು ತಾಲೂಕಿನ ಗೋಸಬಾಳ ಗ್ರಾ.ಪಂ ಕಾರ್ಯಾಲಯದಲ್ಲಿ ಬುಧವಾರದಂದು ಜರುಗಿದ ಎರಡನೇ ಸುತ್ತಿನ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು ಹಾಗೂ ರಸ್ತೆಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಗ್ರಾಮಸ್ಥರ ಸಹಕಾರದೊಂದಿಗೆ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಸಾಧ್ಯ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿಶೇಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಪ್ರತಿಯೊಂದು ಕುಟುಂಬಕ್ಕೂ ಶೌಚಾಲಯ ನಿರ್ಮಿಸುವಂತೆ ಮನವರಿಕೆ ಮಾಡಲಾಗಿದೆ ಅಭಿವೃದ್ದಿ ಕಾರ್ಯಗಳಲ್ಲಿ ಗ್ರಾಮದ ಮುಖಂಡರು, ಗ್ರಾ.ಪಂ ಸದಸ್ಯರು ಸಹಕಾರ ಅತೀ ಮುಖ್ಯವಾಗಿದೆ ಎಂದರು.
ನೊಡೆಲ್ ಅಧಿಕಾರಿಗಳಾಗಿ ಆಗಮಿಸಿದ ಸಹಾಯಕ ಕೃಷಿ ತೋಟಗಾರಿಕೆ ನಿರ್ದೇಶಕ ಜನ್ಮಟ್ಟಿ ಅವರು ಮಾತನಾಡಿ ತಾಲೂಕಿನಲ್ಲಿ ಗೋಸಬಾಳ ಗ್ರಾ.ಪಂ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಯಲ್ಲಪ್ಪ ಹೊಸಮನಿ, ಕಾರ್ಯದರ್ಶಿ ಈರಪ್ಪ ಕುಂದರಗಿ, ಗುಮಾಸ್ತ ಪರಮೇಶ್ವರ ಕಡಕೋಳ ಸೇರಿದಂತೆ ಸಿಬ್ಬಂದಿ ಇದ್ದರು.