RNI NO. KARKAN/2006/27779|Saturday, October 19, 2024
You are here: Home » breaking news » ಮೂಡಲಗಿ:ಚುನಾವಣೆಯಲ್ಲಿ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ : ಶಾಸಕ ಬಾಲಚಂದ್ರ

ಮೂಡಲಗಿ:ಚುನಾವಣೆಯಲ್ಲಿ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ : ಶಾಸಕ ಬಾಲಚಂದ್ರ 

ಚುನಾವಣೆಯಲ್ಲಿ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ : ಶಾಸಕ ಬಾಲಚಂದ್ರ

ಮೂಡಲಗಿ ಅ 7 : ಕಳೆದ ವಿಧಾನಸಭಾ ಚುನಾವಣೆಯಲ್ಲಿ ತುಕ್ಕಾನಟ್ಟಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಅತ್ಯಧಿಕ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡಿದ್ದೀರಿ. ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ನಿಮ್ಮ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ರಾಜಾಪೂರ ಗ್ರಾಮದ ಹನಮಾನ ದೇವಸ್ಥಾನದಲ್ಲಿ ಶನಿವಾರ ಸಂಜೆ ಜರುಗಿದ ಅಭಿನಂದನಾ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ತುಕ್ಕಾನಟ್ಟಿ ಜಿಪಂ ಕ್ಷೇತ್ರವೂ ಸೇರಿದಂತೆ ಅರಭಾವಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.
ಕಳೆದ ಚುನಾವಣೆಯಲ್ಲಿ ಜನತೆಗೆ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ. ಸುವರ್ಣ ಗ್ರಾಮೋದಯ ಯೋಜನೆ, ಸರ್ಕಾರಿ ಪ್ರೌಢ ಶಾಲೆ, ಕನಕ ಭವನ, ಸಮುದಾಯ ಭವನಗಳು ಸೇರಿದಂತೆ ಸಾಕಷ್ಟು ಪ್ರಗತಿಪರ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗಿದೆ. 6.69 ಕೋಟಿ ರೂ. ವೆಚ್ಚದಲ್ಲಿ ರಾಜಾಪೂರ-ಚೂನಿಮಟ್ಟಿ-ಸಂಗನಕೇರಿ ರಸ್ತೆ ಕಾಮಗಾರಿಯನ್ನು ನಾಗರೀಕರಿಗೆ ಅರ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜಾಪೂರ ಗ್ರಾಮದಲ್ಲಿ ಪದವಿ ಪೂರ್ವ ಮಹಾವಿದ್ಯಾಲಯವನ್ನು ಆರಂಭಿಸಲಿಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕಲ್ಲೋಳಿ-ರಾಜಾಪೂರ ಹಾಗೂ ದುರದುಂಡಿ-ರಾಜಾಪೂರ ರಸ್ತೆಗಳನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದೆಂದು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಸತ್ಕರಿಸಿದರು.
ತುಕ್ಕಾನಟ್ಟಿ ಜಿಪಂ ಸದಸ್ಯೆ ಕಸ್ತೂರಿ ಕಮತಿ, ತಾಪಂ ಸದಸ್ಯೆ ಸಂಗೀತಾ ಯಕ್ಕುಂಡಿ, ಗ್ರಾಪಂ ಅಧ್ಯಕ್ಷೆ ದೊಡ್ಡವ್ವ ವಗ್ಗ, ಪಿಕೆಪಿಎಸ್ ಅಧ್ಯಕ್ಷ ಬಸವಂತ ಕಮತಿ, ಪಿಎಲ್‍ಡಿ ಬ್ಯಾಂಕ್ ಉಪಾಧ್ಯಕ್ಷ ರಾಜು ಬೈರುಗೋಳ, ಘಯೋಮನೀಬ ಮಹಾಮಂಡಳದ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ನಿರ್ದೇಶಕ ಬಸವರಾಜ ಪಂಡ್ರೊಳ್ಳಿ, ಸಂಗಯ್ಯ ಹುನ್ನೂರ, ರಾಮಚಂದ್ರ ಪಾಟೀಲ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts: