ಗೋಕಾಕ:18 ರಂದು 65ನೇ ಅಖಿಲ ಭಾರತ ಸಹಕಾರ ಸಪ್ತಾಹ
18 ರಂದು 65ನೇ ಅಖಿಲ ಭಾರತ ಸಹಕಾರ ಸಪ್ತಾಹ
ಗೋಕಾಕ ನ 15 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು,ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ, ಗೋಕಾಕ ತಾಲೂಕಾ ಒಕ್ಕಲುತನ ಹುಟ್ಟವಳಿ ಮಾರಾಟ ಸಹಕಾರ ಸಂಘ ನಿ, ತಾಲೂಕಿನ ಎಲ್ಲ ಸಹಕಾರ ಸಂಘಗಳ ಇವರುಗಳ ಸಂಯುಕ್ತಾಶ್ರಯದಲ್ಲಿ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ದಿ.18ರಂದು ಮುಂಜಾನೆ 11.30ಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಕಾಕದ ಸಭಾಭವನದಲ್ಲಿ ಜರುಗಲಿದೆ.
ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಹಾಗೂ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸುವರು. ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಧ್ವಜಾರೋಹಣ ನೇರವೆರಿಸುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಉಪಾಧ್ಯಕ್ಷ ಬಸಗೌಡ ಆರ್.ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಸವರಾಜ ಸುಲ್ತಾನಪೂರಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಡಿ.ಪಾಟೀಲ, ಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಸುಭಾಷ ಢವಳೇಶ್ವರ, ಜಿ.ಪಂ ಸದಸ್ಯ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಜಿ.ಪಂ ಮಾಜಿ ಸದಸ್ಯ ಡಾ| ರಾಜೇಂದ್ರ ಸಣ್ಣಕ್ಕಿ, ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ, ಡಿಸಿಸಿ ಬ್ಯಾಂಕ ನಿರ್ದೇಶಕ ಶಿವಾನಂದ ಡೋಣಿ, ನೀಲಕಂಠ ಕಪ್ಪಲಗುದ್ದಿ, ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಜಿ.ಎಲ್.ಕಂಕಣವಾಡಿ, ಪಿಎಲ್ ಡಿ ಬ್ಯಾಂಕ ಅಧ್ಯಕ್ಷ ಅಪ್ಪಯ್ಯಪ್ಪ ಬಡನಿಂಗಗೋಳ, ಅಶೋಕ ನಾಯಿಕ, ಅರ್ಬನ್ ಬ್ಯಾಂಕ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಜಿತೇಂದ್ರ ಮಾಂಗಳೇಕರ, ಎಸ್.ಎ.ಕೋತವಾಲ, ಕೆ.ಎಲ್.ಶ್ರೀನಿವಾಸ, ಎಸ್.ಕೆ.ಮಹೇಶ್ವರಪ್ಪ, ಎನ್.ಎನ್. ಶರಾಫ, ಡಿಸಿಸಿ ಬ್ಯಾಂಕ ತಾಲೂಕಾ ನಿಯಂತ್ರಣಾಧಿಕಾರಿ ಮಹಾಂತೇಶ ಕುರುಬೇಟ ಆಗಮಿಸುವರು. ಉಪನ್ಯಾಸಕರಾಗಿ ಎಸ್.ಎಸ್.ಪಾಟೀಲ ಆಗಮಿಸುವರು.