ಗೋಕಾಕ:ದಿ.17 ರಂದು ನಡೆಯಬೇಕಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಶಂಕುಸ್ಥಾಪನೆ ಮುಂದೂಡಿಕೆ
ದಿ.17 ರಂದು ನಡೆಯಬೇಕಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಶಂಕುಸ್ಥಾಪನೆ ಮುಂದೂಡಿಕೆ
ಗೋಕಾಕ ಡಿ 16 : ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಾಳೆ ದಿ.17 ರಂದು ನಡೆಯಬೇಕಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿದ್ದು, ಈ ಕಾರ್ಯಕ್ರಮವು ಮಂಗಳವಾರ 18 ರಂದು ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ತಿಳಿಸಿದ್ದಾರೆ.
ಮಂಗಳವಾರದಂದು ಜರುಗುವ ಈ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು, ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.