RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಛಳ ಬಹುಮತ : ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಧನಶ್ರೀ ಜಾಂಬೋಟಿಕರ ಅಭಿಮತ

ಗೋಕಾಕ:ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಛಳ ಬಹುಮತ : ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಧನಶ್ರೀ ಜಾಂಬೋಟಿಕರ ಅಭಿಮತ 

ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಛಳ ಬಹುಮತ : ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಧನಶ್ರೀ ಜಾಂಬೋಟಿಕರ ಅಭಿಮತ
ಗೋಕಾಕ ಜು 1 : ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿಚ್ಛಳ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲವೆಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಧನಶ್ರೀ ಸರದೇಸಾಯಿ ಜಾಂಬೋಟಿಕರ ಹೇಳಿದರು.

ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶುಕ್ರವಾರ ರಾತ್ರಿ ಜರುಗಿದ ಅರಭಾವಿ ಮಂಡಲ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಕಾಂಗ್ರೇಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮೀತ ಶಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕೈಗಳನ್ನು ಬಲಪಡಿಸಲು ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯು 150 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಜ್ಯದಲ್ಲಿಯೇ ಪ್ರಚಂಡ ಬಹುಮತದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಲಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ ಸಚಿವರಾಗುವುದು ನಿಶ್ಚಿತವೆಂದು ಧನಶ್ರೀ ಸರದೇಸಾಯಿ ಜಾಂಬೋಟಿಕರ ಆಶಾಭಾವನೆ ವ್ಯಕ್ತಪಡಿಸಿದರು.

ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಲೋಚನಾ ಮರ್ದಿ ವಹಿಸಿದ್ದರು.
ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಾ ಭಂಡಾರಿ ಮಾತನಾಡಿದರು.

ಅರಭಾವಿ ಮಂಡಲ ಉಪಾಧ್ಯಕ್ಷೆ ಇಂದಿರಾ ಅಂತರಗಟ್ಟಿ, ಪದಾಧಿಕಾರಿಗಳಾದ ಲಕ್ಷ್ಮೀ ಮುತ್ತೆಪ್ಪ ಝಲ್ಲಿ, ಕಸ್ತೂರೆವ್ವ ಗಿರಣಿ, ಪ್ರಭಾಶುಗರ ನಿರ್ದೇಶಕಿ ಯಲ್ಲವ್ವ ಸಾರಾಪೂರ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts: