ಗೋಕಾಕ:ಆತ್ಮಾಹುತಿ ದಾಳಿ : ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಆತ್ಮಾಹುತಿ ದಾಳಿ : ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 15 :
ಜಮ್ಮು-ಕಾಶ್ಮೀರದ ಶ್ರೀನಗರ ಹೆದ್ದಾರಿಯ ಅವಂತಿಪೋರದಲ್ಲಿ ಗುರುವಾರ ಸಂಜೆ ಪಾಕ್ ಪ್ರೇರಿತ ಭೀಕರ ಆತ್ಮಾಹುತಿ ದಾಳಿಯನ್ನು ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಇದೊಂದು ಕಳೆದ 20 ವರ್ಷಗಳಲ್ಲಿ ನಡೆದಿರುವ ಭೀಕರ ದಾಳಿಯಾಗಿದೆ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಜಮ್ಮು-ಕಾಶ್ಮೀರದಲ್ಲಿ ನಡೆದಿರುವ ಈ ದಾಳಿಯಲ್ಲಿ ಮೃತರಾದ ಯೋಧರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕಲ್ಪಿಸಲಿ. ಹುತಾತ್ಮ ಸೈನಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.