ಗೋಕಾಕ:ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ
ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಪೆ 28 :
ದಿ. 1 ರಿಂದ 18 ರ ವರೆಗೆ ನಡೆಯಲಿರುವ ದ್ವೀತಿಯ ಪಿಯುಸಿ ಪರೀಕ್ಷೆ ನಿಮಿತ್ಯ ಪೂರ್ವಭಾವಿ ಸಭೆ ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲದಾರ ಜಿ.ಎಸ್.ಮಳಗಿ ಅವರು ಮಾತನಾಡಿ, ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್‍ಗಳ ಒಳಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುವ್ಯವಸ್ಥಿತವಾಗಿ ನಡೆಯಲು ಈಗಾಗಲೇ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮೂಡಲಗಿ ತಹಶೀಲದಾರ ಮುರಳಿಧರ ತಳ್ಳಿಕೇರಿ, ಪ್ರಭಾರಿ ಡಿವಾಯ್‍ಎಸ್‍ಪಿ ಪ್ರವೀಣ, ಪೌರಾಯುಕ್ತ ಎಮ್.ಎಚ್.ಅತ್ತಾರ, ಗ್ರೇಡ್-2 ತಹಶೀಲದಾರ ಎಸ್.ಕೆ.ಕುಲಕರ್ಣಿ ಉಪನ್ಯಾಸಕ ದೇವಡಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.