ಗೋಕಾಕ:ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಪರೀಕ್ಷಾ ಪೂರ್ವಭಾವಿ ಸಿದ್ದತೆಯ ಕಾರ್ಯಕ್ರಮ
ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಪರೀಕ್ಷಾ ಪೂರ್ವಭಾವಿ ಸಿದ್ದತೆಯ ಕಾರ್ಯಕ್ರಮ
ನಮ್ಮ ಬೆಳಗಾವಿ ಸುದ್ದಿ ,ಬೆಟಗೇರಿ ಮಾ 19 :
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಇದೇ ಗುರುವಾರ ಮಾರ್ಚ್ 21 ರಿಂದ ಏಪ್ರೀಲ್ 4 ರವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ದೇಯಣ್ಣವರ ಸರಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ದತೆಯ ಕಾರ್ಯಕ್ರಮ ಮಂಗಳವಾರ ಮಾ.19 ರಂದು ನಡೆಯಿತು.
ವಿದ್ಯಾರ್ಥಿಗಳ ಆಸನ ಸಂಖ್ಯೆ ಹಾಕುವುದು, ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರಿಗೆ ವಿಶೇಷ ತರಬೇತಿ ಸಭೆ ಸೇರಿದಂತೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ದತೆಯ ಕುರಿತು ಹಲವಾರು ಕಾರ್ಯಕ್ರಮಗಳು ನಡೆದವು.
ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 14 ಪರೀಕ್ಷಾ ಕೊಠಡಿ, 15 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ ಒಬ್ಬರು, ಓರ್ವ ಕಸ್ಟೊಡಿಯನ್, ಒಬ್ಬರು ಪರೀಕ್ಷಾ ಕೇಂದ್ರದ ಸಹಾಯಕರು ಸೇರಿದಂತೆ ಮತ್ತಿತರು ಕಾರ್ಯನಿರ್ವಹಿಸಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಸುಮಾರು 200 ಮೀಟರ್ ಅಂತರದಲ್ಲಿ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿದೆ. ನಕಲು ನಡೆಯದಂತೆ ಸಿಸಿ ಕ್ಯಾವiರಾ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಸಹ ನಿಯೋಜಿಸಲಾಗಿದೆ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಪ್ರೌಢ ಶಾಲೆಯ ಶಿಕ್ಷಕರಾದ ಮಂಜುನಾಥ ಹತ್ತಿ, ರಮೇಶ ಬುದ್ನಿ, ಮಲ್ಲಿಕಾರ್ಜುನ ಹಿರೇಮಠ, ರಾಕೇಶ ನಡೋಣಿ, ವಿ.ಬಿ. ಬಿರಾದರ, ಶುಭಾ.ಬಿ., ಜಯಶ್ರೀ ಇಟ್ನಾಳ, ವೀಣಾ ಹತ್ತಿ, ಎ.ಬಿ.ತಾಂವಶಿ, ಮೋಹನ ತುಪ್ಪದ, ಪ್ರಮೋದ ದಾಸರ, ಮಲ್ಹಾರಿ ಪೋಳ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಇತರರು ಇದ್ದರು.