ಗೋಕಾಕ:ಈಗ ಕೆಂಪು ಗೂಟದ ಕಾರಿನಲ್ಲಿ ಓಡಾಡುತ್ತಿರುವವರು ಮೇ 23 ರ ನಂತರ ಮಾಜಿಯಾಗಲಿದ್ದಾರೆ : ಹೊಸ ಬಾಂಬ್ ಸಿಡಿಸಿದ ಶಾಸಕ ರಮೇಶ
ಈಗ ಕೆಂಪು ಗೂಟದ ಕಾರಿನಲ್ಲಿ ಓಡಾಡುತ್ತಿರುವವರು ಮೇ 23 ರ ನಂತರ ಮಾಜಿಯಾಗಲಿದ್ದಾರೆ : ಹೊಸ ಬಾಂಬ್ ಸಿಡಿಸಿದ ಶಾಸಕ ರಮೇಶ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 2 :
ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಒಂದು ಕಾಲು ಹೊರಗಿಟ್ಟಿರುವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಇಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವನ್ನು ನಾವು ಬೀಳಿಸಬೇಕಾಗಿಲ್ಲ. ತಾನಾಗೇ ಅದು ಬೀಳುತ್ತದೆ. ಈಗ ಕೆಂಪು ಗೂಟದ ಕಾರಿನಲ್ಲಿ ಓಡಾಡುತ್ತಿರುವವರು ಮೇ 23 ರ ನಂತರ ಮಾಜಿಯಾಗಲಿದ್ದಾರೆ ಎಂದಿದ್ದಾರೆ.
ಅಲ್ಲದೇ ತಮ್ಮ ಆಪ್ತ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿಯವರ ಜೊತೆಯೂ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದು, ಲೋಕಸಭಾ ಫಲಿತಾಂಶದ ದಿನವಾದ ಮೇ 23 ರ ಬಳಿಕ ಈ ಇಬ್ಬರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದರಾ ಎಂಬ ಕುತೂಹಲ ಮೂಡಿಸಿದ್ದಾರೆ.