RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಯಡಿಯೂರಪ್ಪರನ್ನು ಮುಖ್ಯಮಂತ್ರಿಯನ್ನಾಗಿಸಲು ಶಕ್ತಿಮೀರಿ ಸಂಘಟನೆಯಲ್ಲಿ ತೊಡಗಿ : ಕಾರ್ಯಕರ್ತರಿಗೆ ಮಾಜಿ ಸಚಿವ ಬಾಲಚಂದ್ರ ಕರೆ

ಗೋಕಾಕ:ಯಡಿಯೂರಪ್ಪರನ್ನು ಮುಖ್ಯಮಂತ್ರಿಯನ್ನಾಗಿಸಲು ಶಕ್ತಿಮೀರಿ ಸಂಘಟನೆಯಲ್ಲಿ ತೊಡಗಿ : ಕಾರ್ಯಕರ್ತರಿಗೆ ಮಾಜಿ ಸಚಿವ ಬಾಲಚಂದ್ರ ಕರೆ 

ಯಡಿಯೂರಪ್ಪರನ್ನು ಮುಖ್ಯಮಂತ್ರಿಯನ್ನಾಗಿಸಲು ಶಕ್ತಿಮೀರಿ ಸಂಘಟನೆಯಲ್ಲಿ ತೊಡಗಿ : ಕಾರ್ಯಕರ್ತರಿಗೆ ಮಾಜಿ ಸಚಿವ ಬಾಲಚಂದ್ರ ಕರೆ
ಗೋಕಾಕ ಜು 10: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಈಗಿನಿಂದಲೇ ಕಾರ್ಯಕರ್ತರು ಮನೆ-ಮನೆ ಬಾಗಿಲಿಗೆ ತೆರಳಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ವಿವರಿಸಿ ಮತದಾರರ ಮನವೊಲಿಸುವ ಕಾರ್ಯ ನಡೆಸಬೇಕಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ಧೇಶಿಸಿ ಅವರು ಮಾತನಾಡಿದರು.
ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು. ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ವಿವರಿಸಿ ಈಗಿನ ಕಾಂಗ್ರೇಸ್ ಸರ್ಕಾರದ ವೈಫಲ್ಯತೆಗಳನ್ನು ಜನರ ಮುಂದಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಚುರುಕುಗೊಳಿಸಬೇಕಿದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಿ ಬಿಜೆಪಿ ಅಧಿಕಾರಕ್ಕೇರಲು ಎಲ್ಲ ರೀತಿಯ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಇಡೀ ರಾಜ್ಯದ ಜನತೆಯ ಆಶಯವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಕಾರ್ಯಕರ್ತರು ಶಕ್ತಿಮೀರಿ ಸಂಘಟನೆಯಲ್ಲಿ ತೊಡಗಬೇಕು. ಕನಿಷ್ಠ 150 ಸ್ಥಾನಗಳನ್ನು ಗೆಲ್ಲಿಸಿ ಅಧಿಕಾರಕ್ಕೆ ತರಲು ಎಲ್ಲರೂ ಸನ್ನದ್ಧರಾಗಬೇಕು. ಈ ಮೂಲಕ ಕನ್ನಡಿಗರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಅವರು ಹೇಳಿದರು.
ರಾಜ್ಯ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ಹಾಗೂ ಅರಭಾವಿ ಮಂಡಲ ವಿಸ್ತಾರಕ ರಾಜು ಮಗೀಮಠ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಪ್ರಭಾಶುಗರ ನಿರ್ದೇಶಕ ಶಿವಲಿಂಗ ಪೂಜೇರಿ, ಎಪಿಎಂಸಿ ನಿರ್ದೇಶಕ ಶ್ರೀಪತಿ ಗಣೇಶವಾಡಿ, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts: