RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು : ಸಚಿವ ಸತೀಶ

ಗೋಕಾಕ:ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು : ಸಚಿವ ಸತೀಶ 

ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು : ಸಚಿವ ಸತೀಶ

 
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 30 :

 

ತಾಲೂಕಾ ಮಟ್ಟದಲ್ಲಿಯ ಯೋಜನೆಗಳು ನೆನಗುದಿಗೆ ಬೀಳುವ ಸಾಧ್ಯತೆ ಇರುವದರಿಂದ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ಅವರು ನಗರದ ತಾ.ಪಂ. ಸಭಾಭವನದಲ್ಲಿ ಸಮಗ್ರ 5 ಗಂಟೆ ಕಾಲ 23 ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.
ಗುರುವಾರದಂದು ನಡೆದ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಜನಪ್ರತಿನಿಧಿಗಳು ಗಮನ ನೀಡಿ ಇಲಾಖೆಗಳು ನಡೆಸುತ್ತಿರುವ ಕಾರ್ಯಗಳ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದ ಸಚಿವರು ಶೈಕ್ಷಣಿಕ ವಲಯದ ಬಗ್ಗೆ ಸಾರ್ವಜನಿಕರು ಹೆಚ್ಚಿನ ಗಮನ ಹರಿಸುವಂತೆ ಪ್ರೆರೇಪಿಸಬೇಕು. ಸರಕಾರಿ ಶಾಲೆಗಳಿಗೆ ಕಟ್ಟಡಗಳ ಸಮಸ್ಯೆ ಇಡೀ ರಾಜ್ಯದಲ್ಲಿಯೇ ಇದೆ. ಅದಕ್ಕಾಗಿ ಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಶಾಲೆಗಳಿಗೆ ಭೂಮಿ ನೀಡುವಂಥ ವಾತಾವರಣ ನಿರ್ಮಾಣ ಮಾಡಬೇಕು. ಸರಕಾರಿ ಶಾಲೆಗಳಲ್ಲಿ ಸಂಖ್ಯೆ ಮುಖ್ಯವಲ್ಲ, ಗುಣಮಟ್ಟ ಮುಖ್ಯ ಎಂದು ಹೇಳಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸಮಾಜ, ತಾಯಿನಾಡು ಹಾಗೂ ಜನರ ಬಗ್ಗೆ ಕಳಕಳಿ ತುಂಬಬೇಕು ಎಂದು ಕಿವಿಮಾತು ಹೇಳಿದರು.
ಇದರ ಜೊತೆಗೇನೇ ಸಾರ್ವಜನಿಕರಲ್ಲಿ ಗಿಡ-ಮರಗಳನ್ನು ಬೆಳೆಸಬೇಕು. ಸರಕಾರಿ ಅಧಿಕಾರಿಗಳು ತಮ್ಮ ಇಲಾಖೆಯ ಆವರಣದಲ್ಲಿ ಗಿಡಗಳನ್ನು ಬೆಳೆಸುವ ಕಾರ್ಯ ನಾಳೆಯಿಂದಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಈ ಕಾರ್ಯ ಗೋಕಾಕದಿಂದಲೇ ಆರಂಭವಾಗಬೇಕು ಎಂದು ತಿಳಿಸಿದರು.

ಕೃಷಿ , ಆರೋಗ್ಯ , ಸಣ್ಣ ನೀರಾವರಿ , ಲೋಕೋಪಯೋಗಿ , ತಾಲೂಕ ಪಂಚಾಯತ್ , ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನೆಯಲ್ಲಿ ಸಂಧರ್ಭದಲ್ಲಿ ಸಚಿವರ ಮುಂದೆ ಸಾರ್ವಜನಿಕರು ತಮ್ಮ ಸಮಸ್ಯೆಗಳ ಸುರಿಮಳೆ ಗೈದರು ಸಮಸ್ಯೆಗಳನ್ನು ಆಲಿಸಿದ ಸಚಿವರು ಶೀಘ್ರದಲ್ಲೇ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸಮಾಧಾನದಿಂದ ಸೂಚಿಸಿದರು
ವೇದಿಕೆ ಮೇಲೆ ಗೋಕಾಕ ಹಾಗೂ ಮೂಡಲಗಿ ತಹಶೀಲದಾರರಾದ ಪ್ರಕಾಶ ಹೊಳೆಪ್ಪಗೋಳ,ಮುರಳಿಧರ ತಳ್ಳಿಕೇರಿ, ಪೌರಾಯುಕ್ತ ಎಮ್.ಎಚ್.ಅತ್ತಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ದೇವರಾಜ ಇದ್ದರು

Related posts: