RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ : ಎ.ಬಿ.ಮಲಬನ್ನವರ

ಗೋಕಾಕ:ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ : ಎ.ಬಿ.ಮಲಬನ್ನವರ 

ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ : ಎ.ಬಿ.ಮಲಬನ್ನವರ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 17 :

 

 

ಪಾಶ್ಚಿಮಾತ್ಯ ಸಂಸ್ಕøತಿಯ ಅನುಕರಣೆಯಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕುಸಿಯುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ ಎಂದು ಮಧ್ಯಾನ್ಹ ಬೀಸಿಯೂಟ ಯೋಜನಾಧಿಕಾರಿ ಎ.ಬಿ.ಮಲಬನ್ನವರ ಹೇಳಿದರು.
ಇಲ್ಲಿಯ ಗೋಕಾಕ ಶಿಕ್ಷಣ ಸಂಸ್ಥೆಯ, ಆದರ್ಶ ಕನ್ನಡ ಪ್ರಾಥಮಿಕ ಮತ್ತು ಜಿ.ಇ.ಎಸ್. ಪ್ರೌಢಶಾಲೆಯಲ್ಲಿ 2019-20 ನೇ ಸಾಲಿನ ವಿವಿಧ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ನಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ. ಗುರು ಹಿರಿಯರು, ತಂದೆ ತಾಯಿಂದಿರು ದೇವರಿಗೆ ಸಮಾನ ಅವರನ್ನು ಸದಾ ಗೌರವಿಸಬೇಕು. ನಮ್ಮ ಸಂಸ್ಕøತಿ,ನಮಗೆ ಹೆಮ್ಮೆ, ಅದನ್ನು ಉಳಿಸಿ ಬೆಳೆಸುವ ಕಾರ್ಯವನ್ನು ನಾವು ಮಾಡಬೇಕೆಂದು ತಿಳಿಸಿದರಲ್ಲದೇ ಸರಕಾರ ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದ್ಬಳಕೆ ಮಾಡಿಕೊಂಡು, ಗುಣಾತ್ಮಕ ಶಿಕ್ಷಣವನ್ನು ಪಡೆದು ತಮ್ಮ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ಆರ್.ಎಂ.ವಾಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನೀಯರೇ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಮೇಲುಗೈಯನ್ನು ಸಾಧಿಸುತ್ತಿದ್ದಾರೆ. ಅದರಂತೆ ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಕಡೆಗೆ ಗಮನ ಹರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಎಸ್.ಎಸ್.ಇಜೇರಿ, ಪ್ರಧಾನ ಗುರುಮಾತೆ ಎ.ಎಂ.ಶೆಟ್ಟೆನ್ನವರ ಶಿಕ್ಷಕ ಎಸ್.ಎಂ.ಜನ್ಮಟ್ಟಿ ಇದ್ದರು.

Related posts: