ಗೋಕಾಕ:ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆ ಮುಂದೂಡಿಕೆ : ಡಾ.ರಾಜೇಂದ್ರ ಸಣ್ಣಕ್ಕಿ
ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆ ಮುಂದೂಡಿಕೆ : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 21 :
ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜುಲೈ 28 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಂಘದ ಕಾರ್ಯಕಾರಣಿ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸುವುದಾಗಿ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕುರುಬರ ಸಂಘದ ಆಡಳಿತ ಮಂಡಳಿಗೆ ಬರುವ ದಿ. 11 ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಅನಿವಾರ್ಯವಾಗಿ ಚುನಾವಣೆಯನ್ನು ಮುಂದೂಡಬೇಕಾಯಿತು. ಆದ್ದರಿಂದ ಸಮಾಜ ಬಾಂಧವರು ಮತ್ತು ಸಂಘದ ಸದಸ್ಯರುಗಳು ಇದನ್ನು ಗಮನಿಸಿಕೊಂಡು ನಮ್ಮ ಸಂಘದ ಆಡಳಿತ ಮಂಡಳಿ ನಿರ್ಣಯಕ್ಕೆ ಸಹಕಾರ ನೀಡುವಂತೆ ಡಾ.ರಾಜೇಂದ್ರ ಸಣ್ಣಕ್ಕಿ ಅವರು ಕೋರಿದ್ದಾರೆ.