ಗೋಕಾಕ:ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಬೆಗಳನ್ನು ಪ್ರದರ್ಶಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭಾನ್ವಿತರಾಗಿರಿ
ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಬೆಗಳನ್ನು ಪ್ರದರ್ಶಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭಾನ್ವಿತರಾಗಿರಿ
ನಮ್ಮ ಬೆಳಗಾವಿ ಸುದ್ದಿ, ಗೋಕಾಕ ಸೆ : 12
ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಬೆಗಳನ್ನು ಪ್ರದರ್ಶಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭಾನ್ವಿತರಾಗಿರಿ ಎಂದು ಇಲ್ಲಿಯ ಡಿಎಸ್‍ಪಿ ಪ್ರಭು ಡಿ.ಟಿ. ಹೇಳಿದರು.
ಅವರು, ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಗೋಕಾಕ ಹಾಗೂ ಮೂಡಲಗಿ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಗೋಕಾಕ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸರ್ಕಾರ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದು ಉತ್ತಮ ಸಾಧಕರಾಗಿರಿ. ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕವಾಗಿ ಸಧೃಢರಾಗುತ್ತೀರಿ. ಕ್ರೀಡಾ ಕ್ಷೇತ್ರದಲ್ಲೂ ಉತ್ತಮ ಅವಕಾಶಗಳಿದ್ದು, ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ತಮ್ಮ ಸಾಮಥ್ರ್ಯದಿಂದ ಸಾಧಕರಾಗಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಬೇಕೆಂದು ಹೇಳಿದರು.
ವೇದಿಕೆ ಮೇಲೆ ಜಿ.ಪಂ.ಸದಸ್ಯ ಮಡ್ಡೆಪ್ಪ ತೋಳಿನವರ, ಪ್ರಭಾರಿ ಡಿಎಸ್‍ಪಿಗಳಾದ ನರಸಿಂಹ ತಾಮ್ರಧ್ವಜ, ಡಾ. ಗಾನಾಕುಮಾರ, ಕ್ರೀಡಾ ಅನುಷ್ಠಾಣಾಧಿಕಾರಿ ಎಮ್.ಪಿ.ಮರನೂರ, ವಿವಿಧ ಶಿಕ್ಷಕ ಸಂಘಗಳ ಅಧ್ಯಕ್ಷರುಗಳಾದ ಎಮ್.ಬಿ.ಹಿರೇಮಠ, ಆರ್.ಬಿ.ಮಾವಿನಗಿಡದ, ಎಸ್.ಎ.ನಾಯಿಕ ಇದ್ದರು.
ದೈಹಿಕ ಶಿಕ್ಷಕ ಎಮ್.ಎಲ್.ಪಾಗದ ಸ್ವಾಗತಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಎಸ್.ಡಿ.ನಗಾರಿ ವಂದಿಸಿದರು.