RNI NO. KARKAN/2006/27779|Friday, December 13, 2024
You are here: Home » breaking news » ಮೂಡಲಗಿ:ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಮೂಡಲಗಿ:ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ 

ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

 

 

ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಸೆ 12 :

 

 
ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರಿಸಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅರಭಾವಿ ಬ್ಲಾಕ್ ಕಾಂಗ್ರೆಸ್ ಸಮೀತಿಯ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿದರು

ಪಟ್ಟಣದ ಕಲಮೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು

ಅರಭಾವಿ ಮತಕ್ಷೇತ್ರದ ಅವರಾದಿ, ಹುಣ್ಣಶ್ಯಾಳ ಪಿ.ವಾಯ್, ಅರಳಿಮಟ್ಟಿ,ಹುಣ್ಣಶ್ಯಾಳ ಪಿ.ಜಿ,ಮೆಳವಂಕಿ ಸೇರಿದಂತೆ ನದಿ ತೀರದ ಗ್ರಾಮಗಳಲ್ಲಿ ಅಕಾಲಿಕ ಬಂದ ಪ್ರವಾಹದಿಂದ ಜನರು ಮನೆ, ಜಾನುವಾರು ಹೊಲಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ ಪ್ರವಾಹ ತಗ್ಗಿ ಒಂದು ತಿಂಗಳು ಕಳೆದರೂ ಸಹ ಈ ಗ್ರಾಮಗಳಿಗೆ ಮೂಲ ಸೌಕರ್ಯಗಳಾದ ವಿದ್ಯುತ್, ಶುದ್ಧ ಕುಡಿಯುವ ನೀರು ,ರಸ್ತೆಗಳನ್ನು ದುರಸ್ಥಿಮಾಡಿ ಜನರಿಗೆ ಅನುಕೂಲ ಮಾಡಿಲ್ಲ ಇದರಿಂದ ಈ ಗ್ರಾಮದ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ ತಕ್ಷಣ ಸರಕಾರ ಎಚ್ಚೆತ್ತುಕೊಂಡು ಈ ಗ್ರಾಮಗಳನ್ನು ಶಾಶ್ವತವಾಗಿ ಪುನರ್ವಸತಿಗೆ ಕ್ರಮ ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಅರವಿಂದ ದಳವಾಯಿ,ಗುರುರಾಜ ಪೂಜೇರಿ,ಲಗಮಣ್ಣ ಕಳಸನ್ನವರ ಸೇರಿದಂತೆ ಇತರರು ಇದ್ದರು

Related posts: