RNI NO. KARKAN/2006/27779|Friday, November 22, 2024
You are here: Home » breaking news » ಗೋಕಾಕ:ಬಿಜೆಪಿ ಪರಿವಾರಕ್ಕೆ 15 ಕೋಟಿ ಸದಸ್ಯರು : ವಿಶ್ವದಲ್ಲಿಯೇ ಬಿಜೆಪಿ ನಂ.1 ಪಾರ್ಟಿ

ಗೋಕಾಕ:ಬಿಜೆಪಿ ಪರಿವಾರಕ್ಕೆ 15 ಕೋಟಿ ಸದಸ್ಯರು : ವಿಶ್ವದಲ್ಲಿಯೇ ಬಿಜೆಪಿ ನಂ.1 ಪಾರ್ಟಿ 

ಬಿಜೆಪಿ ಪರಿವಾರಕ್ಕೆ 15 ಕೋಟಿ ಸದಸ್ಯರು : ವಿಶ್ವದಲ್ಲಿಯೇ ಬಿಜೆಪಿ ನಂ.1 ಪಾರ್ಟಿ

 

 

ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಸೆ 13 :

 

 
ವಿಶ್ವದಲ್ಲಿಯೇ 10 ಕೋಟಿಗೂ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ಬಲವರ್ಧನೆಯಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ಮುಂದಿನ ದಿನಗಳಲ್ಲಿ 5 ಕೋಟಿ ಹೊಸ ಸದಸ್ಯರು ಬಿಜೆಪಿ ಪರಿವಾರಕ್ಕೆ ಸೇರ್ಪಡೆಯಾಗಲಿದ್ದಾರೆಂದು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಸದಸ್ಯತಾ ಅಭಿಯಾನ ಮಾಡಿದಂತೆ ಸಕ್ರೀಯ ಸದಸ್ಯತಾ ಅಭಿಯಾನ ಆರಂಭವಾಗಿದ್ದು, ಇದನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ದುಡಿಯಬೇಕೆಂದು ಹೇಳಿದರು.
ಪ್ರತಿ ಮತಗಟ್ಟೆಗೆ ಕನಿಷ್ಠ ಇಬ್ಬರಂತೆ ಸಕ್ರೀಯ ಸದಸ್ಯರನ್ನಾಗಿ ಮಾಡಲಾಗುವುದು. ಸೆಪ್ಟೆಂಬರ್ 20 ರವರೆಗೆ ಈ ಅಭಿಯಾನ ನಡೆಯಲಿದ್ದು, ಕಾರ್ಯಕರ್ತರು ಕ್ರೀಯಾಶೀಲರಾಗಿ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಕ್ರೀಯ ಸದಸ್ಯತಾ ನೋಂದಣಿಗೆ ಹೆಚ್ಚು ಒತ್ತು ನೀಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಬಿಜೆಪಿಯಿಂದ ಸಮಗ್ರ ಅಭಿವೃದ್ಧಿ : ಗೋವಿಂದ ಕೊಪ್ಪದ
ಯಾದವಾಡ ಜಿಪಂ ಸದಸ್ಯ ಹಾಗೂ ಬಿಜೆಪಿ ರಾಜ್ಯ ರೈತಮೋರ್ಚಾ ಕಾರ್ಯದರ್ಶಿ ಗೋವಿಂದ ಕೊಪ್ಪದ ಮಾತನಾಡಿ, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರುವುದರಿಂದ ರಾಜ್ಯಕ್ಕೆ ಅನುಕೂಲವಾಗಲಿದೆ. ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಬಿಜೆಪಿಯನ್ನು ಬಲವರ್ಧನೆ ಮಾಡಲಾಗುತ್ತಿದೆ. ರಾಜ್ಯದಲ್ಲಿಯೇ ಅರಭಾವಿ ಮತಕ್ಷೇತ್ರ ಮಾದರಿಯಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಸಾಕಾರಗೊಳಿಸಲಿದ್ದಾರೆಂದು ಹೇಳಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ, ಯುವ ಧುರೀಣ ನಾಗಪ್ಪ ಶೇಖರಗೋಳ, ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಬಸವಂತ ಕಮತಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಅಜ್ಜಪ್ಪ ಗಿರಡ್ಡಿ, ಶಿದ್ಲಿಂಗ ಕಂಬಳಿ, ಪ್ರಭಾಶುಗರ ನಿರ್ದೇಶಕರಾದ ಕೆಂಚಗೌಡ ಪಾಟೀಲ, ಲಕ್ಷ್ಮಣ ಗಣಪ್ಪಗೋಳ, ಕೃಷ್ಣಪ್ಪ ಬಂಡ್ರೊಳ್ಳಿ, ಗಿರೆಪ್ಪ ಹಳ್ಳೂರ, ಎಪಿಎಂಸಿ ನಿರ್ದೇಶಕ ಕೆಂಚಪ್ಪ ಸಕ್ರೆಪ್ಪಗೋಳ, ಪರಸಪ್ಪ ಬಬಲಿ, ರಮೇಶ ಮಾದರ, ರವಿ ಪರುಶೆಟ್ಟಿ, ಜಾಕೀರ ಜಮಾದಾರ, ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts: