RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಪ್ರವಾಹದಿಂದ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿಗೆ 160 ಕೋಟಿ ರೂ. ಬಿಡುಗಡೆ : ಶಿಕ್ಷಣ ಸಚಿವ ಸುರೇಶಕುಮಾರ

ಗೋಕಾಕ:ಪ್ರವಾಹದಿಂದ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿಗೆ 160 ಕೋಟಿ ರೂ. ಬಿಡುಗಡೆ : ಶಿಕ್ಷಣ ಸಚಿವ ಸುರೇಶಕುಮಾರ 

ಪ್ರವಾಹದಿಂದ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿಗೆ 160 ಕೋಟಿ ರೂ. ಬಿಡುಗಡೆ : ಶಿಕ್ಷಣ ಸಚಿವ ಸುರೇಶಕುಮಾರ

 
ಗೋಕಾಕ ಅ 23 : ನೆರೆ ಪೀಡಿತ ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ ಗ್ರಾಮಗಳಿಗೆ ಭೇಟಿ ನೀಡಿದ ಸುರೇಶಕುಮಾರ
ಗೋಕಾಕ : ರಾಜ್ಯದಲ್ಲಿ ಕಳೆದ ಅಗಸ್ಟ್ ತಿಂಗಳಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಶಾಲಾ ಕೊಠಡಿಗಳು ದುರಸ್ತಿ ಕಾರ್ಯಕ್ಕೆ534 ಕೋಟಿಗಳ ರೂಗಳ ಅವಶ್ಯಕತೆ ಇದ್ದು, ಈಗಾಗಲೇ 160 ಕೋಟಿ ರೂಗಳನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಅವರು ತಿಳಿಸಿದರು.
ಬುಧವಾರದಂದು ತಾಲೂಕಿನ ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ ಗ್ರಾಮಗಳ ಪ್ರವಾಹದಿಂದ ಹಾನಿಗೊಳಗಾದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹಾನಿಗೊಳಗಾದ ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆಗಳ ಕಟ್ಟಡಗಳನ್ನು ತಕ್ಷಣವೇ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 1997 ಶಾಲೆಗಳಲ್ಲಿ 2008 ಕೊಠಡಿಗಳ ದುರಸ್ತಿ ಮಾಡಬೇಕಾಗಿದೆ ಎಂದು ಖಾಸಗಿಯವರು ಮಾಡಿದ ಸರ್ವೇಯಲ್ಲಿ ತಿಳಿಸಲಾಗಿದ್ದು, ತಕ್ಷಣವೇ ದುರಸ್ತಿ ಕಾರ್ಯವನ್ನು ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ನಿರಂತರ ಪ್ರವಾಹಕ್ಕೆ ಒಳಗಾಗುವ ಶಾಲೆಗಳನ್ನು ಸುರಕ್ಷಿತ ಸ್ಥಳಾಂತರಿಸಿ ಮಕ್ಕಳ ಕಲಿಕೆಗೆ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುವುದು, ಪಠ್ಯ-ಪುಸ್ತಕಗಳನ್ನು ಎಲ್ಲ ಮಕ್ಕಳಿಗೂ ತಲುಪಿಸಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ರಣರಂಗವಾಗದೇ ಕ್ರೀಡಾಕೂಟಗಳಾಗಬೇಕು. ಶಿಕ್ಷಕರ, ಪಾಲಕರ ಸಲಹೆ ಮೇರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಭಯ ನಿವಾರಣೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಣೆಗೆ ಈ ವರ್ಷದಿಂದ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುವುದು. ಅತಿಥಿ ಶಿಕ್ಷಕರ ಕನಿಷ್ಠ ವೇತನವನ್ನು ಹೆಚ್ಚಿಸುವ ಚಿಂತೆನಯನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ ಸಚಿವರು ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರೀಕ್ಷಿಸಿದರು. ವಿದ್ಯಾರ್ಥಿನೀಯರು ಬಾಲ್ಯ ವಿವಾಹಕ್ಕೆ ಒಳಗಾಗದೇ ಅದನ್ನು ವಿರೋಧಿಸಬೇಕು, ನಿಮ್ಮ ರಕ್ಷಣಗೆ ಸರ್ಕಾರ ಸದಾ ಸಿದ್ದವಿದೆ ಎಂದು ತಿಳಿಸಿದ ಅವರು ಉಪನಿರ್ದೇಶಕರು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರ ಕಲಿಕಾ ಮಟ್ಟವನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|| ಕೆ.ವಿ.ರಾಜೇಂದ್ರ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಮೇಜರ ಸಿದ್ದಲಿಂಗಯ್ಯ ಹಿರೇಮಠ, ಜಿ.ಪಂ ಸದಸ್ಯ ಗೋವಿಂದ ಕೊಪ್ಪದ, ಮಾಜಿ ಜಿಪಂ ಸದಸ್ಯ ಡಾ|| ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಶಿಕ್ಷಣ ಇಲಾಖೆಯ ಸಹನಿರ್ದೇಶಕ ಪ್ರಸನ್ನಕುಮಾರ, ಉಪನಿರ್ದೇಶಕರುಗಳಾದ ಮೋಹನಕುಮಾರ ಹಂಚಾಟಿ, ಎ.ಬಿ.ಪುಂಡಲೀಕ, ತಾಪಂ ಇಓ ಬಸವರಾಜ ಹೆಗ್ಗನಾಯಿಕ, ಮೂಡಲಗಿ ತಹಶೀಲ್ದಾರ ದಿಲಶಾದ ಮಹಾತ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಸಿ. ಮನ್ನಿಕೇರಿ, ಜಿ.ಬಿ. ಬಳಗಾರ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ಬಸವಂತ ಕಮತಿ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಮಹಾದೇವ ಪತ್ತಾರ, ಸಿದ್ದಪ್ಪ ಹಂಜಿ, ಸತ್ತೆಪ್ಪ ಬಬಲಿ, ರಾಮಪ್ಪ ಕಾಪಸಿ, ಅಡಿವೆಪ್ಪ ಕಂಕಾಳಿ, ಕಲಗೌಡ ನಾಯಿಕ, ಶಿವಲಿಂಗ ಬಳಿಗಾರ, ಯಲ್ಲಪ್ಪ ಮುರ್ಕಿಭಾವಿ ಇದ್ದರು.

Related posts: