RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ವೈಜ್ಞಾನಿಕವಾಗಿ ಜಗತ್ತು ಎಷ್ಟೆ ಮುಂದುವರೆದರೂ ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ : ಮುರುಘರಾಜೇಂದ್ರ ಶ್ರೀ

ಗೋಕಾಕ:ವೈಜ್ಞಾನಿಕವಾಗಿ ಜಗತ್ತು ಎಷ್ಟೆ ಮುಂದುವರೆದರೂ ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ : ಮುರುಘರಾಜೇಂದ್ರ ಶ್ರೀ 

ವೈಜ್ಞಾನಿಕವಾಗಿ ಜಗತ್ತು ಎಷ್ಟೆ ಮುಂದುವರೆದರೂ ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ : ಮುರುಘರಾಜೇಂದ್ರ ಶ್ರೀ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 2 :

 
ವೈಜ್ಞಾನಿಕವಾಗಿ ಜಗತ್ತು ಎಷ್ಟೆ ಮುಂದುವರೆದರೂ ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಾಗಿಲ್ಲ, ರಕ್ತವನ್ನು ದಾನಿಗಳಿಂದಲೇ ಪಡೆಯಬೇಕಾಗಿದೆ ಎಂದು ಇಲ್ಲಿಯ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಶನಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗ ದಳ, ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ರೋಟರಿ ರಕ್ತ ಭಂಡಾರ ಇವುಗಳ ಸಂಯುಕ್ತಾಶ್ರಯದಲ್ಲಿ ಅಯೋಧ್ಯ ಬಲಿದಾನ ದಿನದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡುವುದರಿಂದ ಮತ್ತೋಬ್ಬರ ಜೀವವನ್ನು ಉಳಿಸಬಹುದಾಗಿದೆ ರಕ್ತದಾನದಿಂದ ಆರೋಗ್ಯವಂತ ರಾಷ್ಟçವನ್ನು ನಿರ್ಮಾಣ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಪ್ರವೃತ್ತರಾಗಿರುವ ಭಜರಂಗದಳದ ಕಾರ್ಯಕರ್ತರ ಕಾರ್ಯ ಮಾದರಿಯಾಗಿದೆ. ಎಲ್ಲರೂ ರಕ್ತದಾನ ಮಾಡುವಂತೆ ಕರೆ ನೀಡಿದರು.
ವಿಎಚ್‌ಪಿಯ ನಾರಾಯಣ ಮಠಾಧಿಕಾರಿ ಮಾತನಾಡಿ, ಬಜರಂಗದಳದ ಲಕ್ಷಾಂತರ ಕಾರ್ಯಕರ್ತರು ರಕ್ತದಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಂಡು ದೇಶ ಕಟ್ಟುವ ಕಾರ್ಯವನ್ನು ಮಾಡುತ್ತಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಬಜರಂಗದಳದ ಬೆಳಗಾವಿ ವಿಭಾಗ ಸಂಚಾಲಕ ಸದಾಶಿವ ಗುದಗಗೋಳ, ಕಸಾಪ ತಾಲೂಕಾಧ್ಯಕ್ಷ ಮಹಾಂತೇಶ ತಾಂವಶಿ, ಲಕ್ಷö್ಮಣ ಮಿಶಾಲೆ, ಮಂಜುನಾಥ ಘಮಾಣಿ, ಎಚ್‌ಡಿಎಫ್‌ಸಿ ಬ್ಯಾಂಕಿನ ಮ್ಯಾನೇಜರ್ ವಿಜಯಾನಂದ ಮಟ್ಟಿಕಲಿ ಇದ್ದರು.

Related posts: