ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 2 :
ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿ ತಾಲೂಕಾ ಘಟಕದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು-ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸಿ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಶನಿವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಶಿಕ್ಷಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನ ಸೌಧಕ್ಕೆ ತೆರಳಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದ ಶೈಕ್ಷಣಿಕ ಕ್ರಾಂತಿ ಮಾಡುವಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಮಾನ್ಯಗಳು ಶ್ರಮಿಸುತ್ತಾ ಬಂದಿವೆ. ಸರ್ಕಾರವು ಸಹಕಾರ ನೀಡುತ್ತಿದೆ. ಆದರೂ ನಮ್ಮ ಕೆಲ ಬೇಡಿಕೆಗಳು ಈಡೇರದೇ ಶೈಕ್ಷಣಿಕ ಕಾರ್ಯ ಕುಂಠಿತವಾಗುತ್ತಿದೆ. ಕೂಡಲೇ ನಮ್ಮ ಬೇಡಿಕೆಗಳಾದ ೧೯೯೫ರ ನಂತರ ಪ್ರಾರಂಭವಾದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಮಹಾವಿದ್ಯಾಲಯಗಳಿಗೂ ಅನುದಾನ ವಿಸ್ತರಣೆ ಮಾಡಬೇಕು. ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀರ್ಘ ಭರ್ತಿ ಮಾಡಬೇಕು. ಶಿಕ್ಷಕರ ಮತ್ತು ಮಕ್ಕಳ ಅನುಪಾತ ೧:೫೦ ಜಾರಿ ಮಾಡಬೇಕು. ಎಮ್‌ಪಿಎಸ್ ರದ್ದುಗೊಳಿಸಬೇಕು. ಕಾಲ್ಪನಿಕ ವೇತನ, ಭಡ್ತಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಜ್ಯೋತಿ ಸಂಜಿವೀನಿ ಯೋಜನೆಯನ್ನು ಜಾರಿ ಮಾಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಮರಡಿಮಠದ ಶ್ರೀ ಪವಾಡೇಶ್ವರ ಮಹಾಸ್ವಾಮಿಗಳು, ಉಪಾಧ್ಯಕ್ಷ ಎಸ್.ಎಸ್.ಅಂಗಡಿ, ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬರಗಾಲಿ, ಕಾರ್ಯದರ್ಶಿ ಬಿ.ಆರ್.ಚಿಪ್ಪಲಕಟ್ಟಿ ಸೇರಿದಂತೆ ಅನೇಕರು.