ಬೆಳಗಾವಿ : ಮಾಜಿ ಸಚಿವ ರಮೇಶ ಸೇರಿ 15 ಜನ ಅನರ್ಹ ಶಾಸಕರು ಬಿಜೆಪಿಗೆ ಎಂಟ್ರಿ
ಮಾಜಿ ಸಚಿವ ರಮೇಶ ಸೇರಿ 15 ಜನ ಅನರ್ಹ ಶಾಸಕರು ಬಿಜೆಪಿಗೆ ಎಂಟ್ರಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ನ 14 :
ಅನರ್ಹ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ 15 ಜನ ರಮೇಶ ಬೆಂಬಲಿಗ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಎದುರು ನಡೆದ ಕಾರ್ಯಕ್ರಮದಲ್ಲಿ ಎಲ್ಲ 15 ಅನರ್ಹ ಶಾಸಕರನ್ನು ಬಿಜೆಪಿಗೆ ಸ್ವಾಗತಿಸಲಾಯಿತು
ರಮೇಶ ಜಾರಕಿಹೊಳಿ, ಮಹೇಶ ಕುಮಟಳ್ಳಿ, ಶ್ರೀಮಂತ ಪಾಟೀಲ್, ಬಿ.ಸಿ. ಪಾಟೀಲ್, ನಾರಾಯಣಗೌಡ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಎಚ್. ವಿಶ್ವನಾಥ್, ಮುನಿರತ್ನ, ಗೋಪಾಲಯ್ಯ, ಆರ್. ಶಂಕರ್, ಡಾ. ಕೆ. ಸುಧಾಕರ್, ಪ್ರತಾಪ್ ಗೌಡ ಪಾಟೀಲ್, ಎಸ್. ಟಿ. ಸೋಮಶೇಖರ್, ಭೈರತಿ ಬಸವರಾಜ್ ಅವರು ಇಂದು ಬಿಜೆಪಿ ಸೇರ್ಪಡೆಯಾದರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅನರ್ಹ ಶಾಸಕರಿಗೆ ಬಿಜೆಪಿ ಭಾವುಟ ಕೊಟ್ಟು ಪಕ್ಷಕ್ಕೆ ಬರ ಮಾಡಿಕೊಂಡರು.
ರಾಜ್ಯದ ಮೂಲೆ ಮೂಲೆಯಿಂದ ಬಂದ ಸಾವಿರಾರು ಜನ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು
ಈ ಸಂದರ್ಭದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ ಮತ್ತಿತತರು ಇದ್ದರು.