RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಸಹೋದರರಿಬ್ಬರ ಭಿನ್ನಮತ ನಿವಾರಣೆಗೆ ಸಂಧಾನ ಮಾಡಿದರೂ ಯಶಸ್ವಿಯಾಗಲಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಸಹೋದರರಿಬ್ಬರ ಭಿನ್ನಮತ ನಿವಾರಣೆಗೆ ಸಂಧಾನ ಮಾಡಿದರೂ ಯಶಸ್ವಿಯಾಗಲಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ 

ಸಹೋದರರಿಬ್ಬರ ಭಿನ್ನಮತ ನಿವಾರಣೆಗೆ ಸಂಧಾನ ಮಾಡಿದರೂ ಯಶಸ್ವಿಯಾಗಲಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 19 :

 
ರಾಜಕೀಯವಾಗಿ ಬೇರೆ ಬೇರೆಯಾಗಿದ್ದರೂ ನಮ್ಮ ಕುಟುಂಬ ಒಂದಾಗಿರಬೇಕೆಂಬ ಮಹಾದಾಸೆ ನನ್ನದಾಗಿತ್ತು. ಇದಕ್ಕಾಗಿ ಸಾಕಷ್ಟು ಬಾರಿ ಪ್ರಯತ್ನಪಟ್ಟೆ. ಆದರೂ ಯಾರೊಬ್ಬರೂ ನನ್ನ ಮಾತು ಕೇಳುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ನಮ್ಮ ಕುಟುಂಬದಲ್ಲಿಯೇ ಸಹೋದರರಿಬ್ಬರೂ ಎದುರಾಳಿಗಳಾಗಿ ಪರಸ್ಪರ ಚುನಾವಣೆ ಎದುರಿಸುತ್ತಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರಿಂದು ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕುಟುಂಬವೇ ಬೇರೆ. ರಾಜಕೀಯವೇ ಬೇರೆ. ಯಾರೊಬ್ಬರೂ ವ್ಯಕ್ತಿಗತ ಟೀಕೆ ಮಾಡದಂತೆ ಅವರು ಮನವಿ ಮಾಡಿಕೊಂಡ ಅವರು, ಇಬ್ಬರು ಸಹೋದರರ ಮಧ್ಯ ಮೂರನೆಯ ವ್ಯಕ್ತಿಗೆ ಲಾಭವಾಗಲಿದೆ ಎಂಬುದನ್ನು ಸ್ಪಷ್ಟವಾಗಿ ತಳ್ಳಿಹಾಕಿ, ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ ಜಾರಕಿಹೊಳಿ ಅವರು ಜಯ ಸಾಧಿಸುತ್ತಾರೆಂದು ಹೇಳಿದರು.
ಬಿಜೆಪಿ ಕಾರ್ಯಕರ್ತರು ಮತ್ತು ರಮೇಶ ಜಾರಕಿಹೊಳಿ ಅವರ ಕಾರ್ಯಕರ್ತರಲ್ಲಿ ಯಾವುದೇ ಮನಸ್ತಾಪಗಳಿಲ್ಲ. ಈಗಾಗಲೇ ಎಲ್ಲರೊಂದಿಗೂ ಮಾತನಾಡಿ ಒಂದಾಗಿ ಹೋಗುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಶೇ ೮೦ ರಷ್ಟು ಬಿಜೆಪಿ ಕಾರ್ಯಕರ್ತರು ನಿನ್ನೆ ನಡೆದಿರುವ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಭಾಗವಹಿಸಿದ್ದರು. ಬಿಜೆಪಿ ಸರ್ಕಾರದ ಜನಪ್ರೀಯ ಯೋಜನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚಿಸಲಾಗಿದೆ. ರಮೇಶ ಜಾರಕಿಹೊಳಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸಹ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ರಚನೆಯಲ್ಲಿ ರಮೇಶ ಜಾರಕಿಹೊಳಿ ನೇತೃತ್ವದ ೧೭ ಶಾಸಕರ ಪಾತ್ರ ಬಹು ಮುಖ್ಯವಾಗಿತ್ತು. ಜೊತೆಗೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದರೇ ಮಾತ್ರ ನಾವು ಬಿಜೆಪಿಗೆ ಬೆಂಬಲ ನೀಡುತ್ತೇವೆಂದು ಬಿಜೆಪಿ ರಾಷ್ಟಾçಧ್ಯಕ್ಷ ಅಮೀತ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಗೋಕಾಕ ಉಪಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪನವರು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಕ್ಷೇತ್ರದ ಎಲ್ಲ ಸಮುದಾಯಗಳ ಬೆಂಬಲದೊAದಿಗೆ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಲಿದ್ದಾರೆಂದು ಹೇಳಿದರು.
ಸಾಲಗಾರರಾಗಿರುವುದು ದೊಡ್ಡ ವಿಷಯವೇನಲ್ಲ : ಸ್ವಂತ ಕಾರ್ಖಾನೆ ನಡೆಸುತ್ತಿರುವ ರಮೇಶ ಜಾರಕಿಹೊಳಿ ಅವರು ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿರುವುದು ದೊಡ್ಡ ವಿಷಯವೇನಲ್ಲ. ಕಾರ್ಖಾನೆ ನಡೆಸುವುದು ಇಂದಿನ ದಿನಗಳಲ್ಲಿ ಕಷ್ಟಕರವಾಗಿದೆ. ಬಹುತೇಕ ಕಾರ್ಖಾನೆ ನಡೆಸುತ್ತಿರುವ ಮಾಲೀಕರುಗಳು ಸಹ ಬ್ಯಾಂಕುಗಳಲ್ಲಿ ಸಾಲ ಹೊಂದಿದ್ದಾರೆ. ಮಾಡಿರುವ ಸಾಲವನ್ನು ಇಷ್ಟರಲ್ಲಿಯೇ ರಮೇಶ ಜಾರಕಿಹೊಳಿ ತೀರಿಸುತ್ತಾರೆ. ಸಾಲಕ್ಕೂ ಹಾಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದರು.

ಅಶೋಕ ಪೂಜಾರಿ ಸ್ಪರ್ಧೆಯಿಂದ ಯಾವುದೇ ತೊಂದರೆಯಿಲ್ಲ : ಜೆಡಿಎಸ್‌ನಿಂದ ಸ್ಪರ್ಧೆಗಿಳಿದಿರುವ ಅಶೋಕ ಪೂಜಾರಿ ಅವರ ಜೊತೆ ಮಾತನಾಡಿದ್ದೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡಬೇಡಿ. ನಮ್ಮೊಂದಿಗೆ ಪ್ರಚಾರಕ್ಕೆ ಬನ್ನಿ. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಕುಳಿತು ಮಾತಾಡೋಣ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವದರಿಂದ ಎಲ್ಲರಿಗೂ ಒಳ್ಳೆಯದಾಗಲಿದೆ. ಸ್ವತಃ ಮುಖ್ಯಮಂತ್ರಿಗಳು ಸಹ ಮಾತನಾಡಿದ್ದರು. ಆದರೆ ಇದ್ಯಾವದನ್ನೂ ಲೆಕ್ಕಿಸದೆ ಜೆಡಿಎಸ್‌ನಿಂದ ಪೂಜಾರಿ ಸ್ಪರ್ಧೆ ಮಾಡಿದ್ದಾರೆ. ಇವರ ಸ್ಪರ್ಧೆಯಿಂದ ನಮಗೆ ಯಾವ ಹಾನಿಯಾಗುವುದಿಲ್ಲ. ಈ ಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ. ರಮೇಶ ಅವರು ಸುಮಾರು ೫೦ ಸಾವಿರ ಮತಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು.

ರಮೇಶಗೆ ಮಂತ್ರಿ ಸ್ಥಾನ : ರಮೇಶ ಜಾರಕಿಹೊಳಿ ಅವರು ೧೯೯೯ ರಿಂದ ಸತತ ಶಾಸಕರಾಗಿ, ಸಚಿವರಾಗಿ ಗೋಕಾಕ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಡಿ.೫ ರಂದು ನಡೆಯುವ ಉಪಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು. ಇದರಿಂದ ಕ್ಷೇತ್ರಕ್ಕೆ ಎರಡು ಲಾಭವಾಗಲಿವೆ. ಶಾಸಕ ಸ್ಥಾನದ ಜೊತೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಖಾತೆ ಸಿಗಲಿದೆ. ಸ್ವತಃ ಯಡಿಯೂರಪ್ಪನವರು ಇದರ ಬಗ್ಗೆ ಈಗಾಗಲೇ ಸುಳಿವು ನೀಡಿದ್ದಾರೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Related posts: