RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ರಮೇಶ ಜಾರಕಿಹೊಳಿ ಅವರ ಗೆಲುವಿಗೆ ರಣತಂತ್ರ

ಗೋಕಾಕ:ರಮೇಶ ಜಾರಕಿಹೊಳಿ ಅವರ ಗೆಲುವಿಗೆ ರಣತಂತ್ರ 

ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಗೆಲುವಿಗೆ ರಣತಂತ್ರ
ಸತತ 10 ಗಂಟೆ ಕಾಲ ಗೋಕಾಕ ಮತಕ್ಷೇತ್ರದ ಬೂತ್‍ಮಟ್ಟದ ಕಾರ್ಯಕರ್ತರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 24 :

 

ಪ್ರತಿ ಮತಗಟ್ಟೆಯ ಕಾರ್ಯಕರ್ತರು ನಾಳೆಯಿಂದಲೇ ಪ್ರತಿ ಮನೆ-ಮನೆಗೆ ತೆರಳಿ ರಮೇಶ ಜಾರಕಿಹೊಳಿ ಅವರ ಗುರುತಿನ ಕಮಲ ಚಿನ್ಹೆಗೆ ಮತ ಹಾಕಿಸುವ ಮೂಲಕ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟು ಮತ್ತೊಮ್ಮೆ ಜನಸೇವೆಗೆ ಅವಕಾಶ ಕಲ್ಪಿಸಿಕೊಡುವಂತೆ ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಮನವಿ ಮಾಡಿಕೊಂಡರು.
ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ರವಿವಾರದಂದು ನಡೆದ ಗೋಕಾಕ ಮತಕ್ಷೇತ್ರದ ಬೂತ್‍ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಈ ಬಾರಿ ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಇರುವುದರಿಂದ ಕ್ಷೇತ್ರವು ಹೆಚ್ಚಿನ ಅಭಿವೃದ್ದ್ದಿ ಕಾಣುತ್ತದೆ. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ ಜಾರಕಿಹೊಳಿ ಅವರು ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಸ್ವತ: ಮುಖ್ಯಮಂತ್ರಿಗಳು ನಿನ್ನೆ ನಗರದಲ್ಲಿ ನಡೆದ ಬಿಜೆಪಿ ಬೃಹತ್ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. ರಮೇಶ ಅವರು ಸಚಿವರಾಗುವುದರಿಂದ ಕ್ಷೇತ್ರ ಹಾಗೂ ಜಿಲ್ಲೆಯು ಸಮಗ್ರ ಅಭಿವೃದ್ದಿ ಪಥದತ್ತ ಸಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಒಂದಾಗಿ ಒಗ್ಗಟ್ಟಾಗಿ ರಮೇಶ ಜಾರಕಿಹೊಳಿ ಪರ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕೋರಿದರು.
ಸ್ವತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಾನು ಈ ರಾಜ್ಯದ ಮುಖ್ಯಮಂತ್ರಿಯಾಗಿರುವುದು ರಮೇಶ ಜಾರಕಿಹೊಳಿ ಅವರ ಕೃಪೆಯಿಂದಾಗಿ ಎಂದು ಹೇಳಿರುವುದು ನಮಗೆ ಸಂತಸವನ್ನುಂಟು ಮಾಡಿದೆ. ಯಡಿಯೂರಪ್ಪನವರು ಗೋಕಾಕಕ್ಕೆ ಆಗಮಿಸಿ ಕಾರ್ಯಕರ್ತರನ್ನು ಹುರದುಂಭಿಸಿದ್ದಾರೆ. ಗೋಕಾಕ ಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಅರಳಲು ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಬೇಕೆಂದು ಹೇಳಿದರು.
ರಮೇಶ ಜಾರಕಿಹೊಳಿ ಅವರ ಶಕ್ತಿ ಏನೆಂಬುವುದು ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಇಂದು ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದು ಇವರಿಂದಾಗಿಯೇ. ರಾಜ್ಯದಲ್ಲಿ ಬಿಜೆಪಿ ಉದಯಿಸಲು ಮೂಲ ಕಾರಣಿಕರ್ತರಾದ ರಮೇಶ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಯಾರು ಏನೇ ಹೇಳಿದರೂ ಈ ಬಾರಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಕೋರಿದರು.
ಸತತ 10 ಗಂಟೆಗಳ ಕಾಲ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ: ಇಂದು ಮುಂಜಾನೆಯಿಂದಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯ ಆವರಣದಲ್ಲಿ ಕ್ಷೇತ್ರದ ಪ್ರತಿ ಗ್ರಾಮಗಳ ಬೂತಮಟ್ಟದ ಕಾರ್ಯಕರ್ತರ ಸಭೆಯನ್ನು ನಡೆಸಿದರು. ಸುಮಾರು 6ಸಾವಿರಕ್ಕೂ ಅಧಿಕ ಕಾರ್ಯಕರ್ತರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಗೆಲುವಿನ ಕಾರ್ಯತಂತ್ರವನ್ನು ಸಭೆಯಲ್ಲಿ ಹೆಣೆಯಲಾಯಿತು. ಶಾಸಕರಾಗಿ ಹಾಗೂ ಮುಂದೆ ಸಚಿವರಾಗಲಿರುವ ರಮೇಶ ಜಾರಕಿಹೊಳಿ ಅವರಿಂದ ಗೋಕಾಕ ಕ್ಷೇತ್ರಕ್ಕೆ ಹೆಚ್ಚಿನ ವರದಾನವಾಗಲಿದೆ. ಕ್ಷೇತ್ರದ ಅಭಿವೃದ್ದಿಗಾಗಿ ಸರ್ಕಾರದಿಂದ ಹೆಚ್ಚಿನ ನೆರವು ಪಡೆದು ಗೋಕಾಕ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವ ಸಂಕಲ್ಪ ಅವರದ್ದಾಗಿದೆ. 20 ವರ್ಷಗಳ ಕಾಲ ಶಾಸಕರಾಗಿ ಗೋಕಾಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಪರ ಕೆಲಸ ಮಾಡಿದ್ದಾರೆ ಅವರ ಸಾಧನೆಗಳನ್ನು ಹಾಗೂ ಬಿಜೆಪಿ ಸರ್ಕಾರ ಯೋಜನೆಗಳನ್ನು ಮತದಾರರಿಗೆ ವಿವರಿಸಿ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು.

Related posts: