RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ವರ್ತಕರ ಸಂಘದಿಂದ ಬೆಂಬಲ

ಗೋಕಾಕ:ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ವರ್ತಕರ ಸಂಘದಿಂದ ಬೆಂಬಲ 

ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ವರ್ತಕರ ಸಂಘದಿಂದ ಬೆಂಬಲ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 28 :

 
ಗೋಕಾಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಲು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಅಮೂಲ್ಯ ಮತ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು.
ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪರ ಬಿರುಸಿನ ಪ್ರಚಾರ ಮಾಡುತ್ತಿರುವ ಅವರು, ಇಲ್ಲಿಯ ವರ್ತಕರ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದರು.
ಗೋಕಾಕ ಮತಕ್ಷೇತ್ರದ ಅಭಿವೃದ್ದಿಗಾಗಿ ಕಳೆದ 20 ವರ್ಷಗಳಿಂದ ಅವಿರತವಾಗಿ ಶ್ರಮಿಸಿದ್ದಾರೆ.ಸಾಕಷ್ಟು ಅಭಿವೃದ್ಧಿ ಪರ ಕೆಲಸಗಳು ನಡೆದಿವೆ.ಪಕ್ಷಾತೀತವಾಗಿ ಕ್ಷೇತ್ರದ ವಿಕಾಸಕ್ಕೆ ಕೊಡುಗೆ ನೀಡಿರುವ ಅವರು, ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗೆ ಇಳಿದಿದ್ದಾರೆ.ಆದ್ದರಿಂದ ನಗರದ ವರ್ತಕರು ಬಿಜೆಪಿಯನ್ನು ಬೆಂಬಲಿಸಿ ಆಶೀರ್ವದಿಸುವಂತೆ ಕೋರಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ನೆರವು ಹರಿದು ಬರಲಿದೆ. ಜೊತೆಗೆ ರಮೇಶ ಜಾರಕಿಹೊಳಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿರುವುದರಿಂದ ಗೋಕಾಕ ಮತಕ್ಷೇತ್ರವು ನಿರೀಕ್ಷೆಗೂ ಮೀರಿ ಅಭಿವೃದ್ಧಿ ಪಥದತ್ತ ಸಾಗುತ್ತದೆ. ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಪ್ರಭಾ ಶುಗರ್ ಚೇರಮನ್ ಅಶೋಕ ಪಾಟೀಲ, ಗಣ್ಯ ವರ್ತಕರಾದ ಮಹಾಂತೇಶ ತಾಂವಶಿ, ವಿಠ್ಠಲ ಹೆಜ್ಜಗಾರ, ನಂದು ಶಾ, ಜೀತು ರಾಠೋಡ, ವೀರಣ್ಣ ಬಿದರಿ, ಮಹಾವೀರ ಭರಮಗೌಡ, ವಿಕ್ರಮ ಅಂಗಡಿ, ಅಡಿವೆಪ್ಪ ಕಿತ್ತೂರ, ದುಂಡಪ್ಪ ಬಿದರಿ, ಮಹಾಂತೇಶ ಕಲ್ಲೋಳಿ.ಪ್ರಕಾಶ ಕೋಲಾರ, ಸುರೇಶ ಬಡೆಪ್ಪಗೋಳ, ಪುಂಡಲೀಕ ಮೇಟಿ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಅವರಿಗೆ ಬೆಂಬಲ ನೀಡುವುದಾಗಿ ವರ್ತಕರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೇಳಿದರು.

Related posts: