ಗೋಕಾಕ:ಹಣ ಹಂಚಿಕೆ ಆರೋಪ : ಬಾಲಚಂದ್ರ ಜಾರಕಿಹೊಳಿ, ಸತೀಶ ಜಾರಕಿಹೊಳಿ ಬೆಂಬಲಿಗರ ನಡವೆ ಘರ್ಷಣೆ
ಹಣ ಹಂಚಿಕೆ ಆರೋಪ : ಬಾಲಚಂದ್ರ ಜಾರಕಿಹೊಳಿ, ಸತೀಶ ಜಾರಕಿಹೊಳಿ ಬೆಂಬಲಿಗರ ನಡವೆ ಘರ್ಷಣೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 5 :
ಮತದಾರರಿಗೆ ಹಣ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ
ಬಾಲಚಂದ್ರ ಜಾರಕಿಹೊಳಿ, ಸತೀಶ ಜಾರಕಿಹೊಳಿ ಬೆಂಬಲಿಗರ ನಡವೆ ಘರ್ಷಣೆ ನಡೆದ ಘಟನೆ ಜರುಗಿದೆ
ಗುರುವಾರದಂದು ಗೋಕಾಕ ಮತಕ್ಷೇತ್ರದ ಮದವಾಲ ಗ್ರಾಮದಲ್ಲಿ ಅರಬಾವಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗನ ಮೇಲೆ ಹಲ್ಲೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ
ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗನಿಂದ ಹಲ್ಲೆಯ ಯತ್ನ ನಡೆದಿದೆ ಎನ್ನಲಾಗಿದ್ದು , ಜಿಪಂ ಸದಸ್ಯ ಗೋವಿಂದ ಕೊಪ್ಪದ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. ಸ್ಥಳಕ್ಕೆ ಮಾಜಿ ಸಚಿವ , ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ