RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಡಿ.20 ರಂದು ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

ಗೋಕಾಕ:ಡಿ.20 ರಂದು ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ 

ಡಿ.20 ರಂದು ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ

 

ನಮ್ಮ ಬೆಳಗಾವಿ ಇ / ವಾರ್ತೆ , ಬೆಟಗೇರಿ ಡಿ 18 :

 

ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಪ್ರತಿವರ್ಷದಂತೆ ಈ ವರ್ಷವೂ ಇದೆ ಶುಕ್ರವಾರ ಡಿ.20 ರಂದು ನಡೆಯಲಿದೆ.
ಡಿ.20 ರಂದು ಬೆಳಿಗ್ಗೆ 7 ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವ ಕಾರ್ಯಕ್ರಮ ನಡೆದ ಬಳಿಕ ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೆದ್ಯ ಸಮರ್ಪಿಸುವ ಕಾರ್ಯಕ್ರಮ ನಡೆದು ಮಹಾಪ್ರಸಾದ, ಸಾಯಂಕಾಲ 6 ಗಂಟೆಗೆ ದೀಪೋತ್ಸವ ಕಾರ್ತಿಕೋತ್ಸವ ಕಾರ್ಯಕ್ರಮ ಜರುಗಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಸಂತ ಶರಣರು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆಂದು ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

Related posts: