RNI NO. KARKAN/2006/27779|Saturday, October 19, 2024
You are here: Home » breaking news » ಘಟಪ್ರಭಾ:ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ : ಮಲ್ಲಿಕಾರ್ಜುನ ಮಹಾಸ್ವಾಮಿಗಳು

ಘಟಪ್ರಭಾ:ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ : ಮಲ್ಲಿಕಾರ್ಜುನ ಮಹಾಸ್ವಾಮಿಗಳು 

ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ : ಮಲ್ಲಿಕಾರ್ಜುನ ಮಹಾಸ್ವಾಮಿಗಳು

 

 
ನಮ್ಮ ಬೆಳಗಾವಿ ಇ –ವಾರ್ತೆ , ಘಟಪ್ರಭಾ ಡಿ.25 :

 

 

ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಉನ್ನತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಅನೇಕ ಶಿಕ್ಷಣ ಸಂಸ್ಥೆಗಳು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿವೆ ಎಂದು ಸ್ಥಳೀಯ ಗುಬ್ಬಲಗುಡ್ಡ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಹೇಳಿದರು.
ಅವರು ಸ್ಥಳೀಯ ನೀಡ್ಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಅಕ್ಕುತಾಯಿ ಆದರ್ಶ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಮತ್ತ್ತು ಶ್ರೀ ಜಿ.ಬಿ.ಬಡಕುಂದ್ರಿ ಕಲಾ & ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 4ನೇ ವರ್ಷದ ಸ್ನೇಹ ಸಮ್ಮೇಳನದ ಸಾನಿಧ್ಯವನ್ನು ವಹಿಸಿ ಮಾತನಾಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪತಕಿ ಇವರು “ನೀಡ್ಸ್” ಶಿಕ್ಷಣ ಸಂಸ್ಥೆಯ ಶಿಸ್ತನ್ನು ಕೊಂಡಾಡಿ, ಬಡಕುಂದ್ರಿ ದಂಪತಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಂಸ್ಥೆಯ ಅಭಿವೃದ್ಧಿüಗೆ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅರವಿಂದ ಬಡಕುಂದ್ರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಿತ್ತೂರ ರಾಣಿ ಚನ್ನಮ್ಮ ಅಂತರ ರಾಷ್ಟ್ರೀಯ ವಸತಿ ಶಾಲೆಯ ನಿವೃತ ಮುಖ್ಯೋಪಾಧ್ಯಾಯ ಕು. ಶೋಭಾ ಪತಕಿ, ಶ್ರೀ ಗಂಗಾಧರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಭರಮರಾಹುತ, ಪತ್ರಕರ್ತರ ಗಣೇಶ ಗಾಣಿಗ ಆಗಮಿಸಿದ್ದರು.
ಕಳೆದ ವರ್ಷದ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿ ವಿವಿಧ ನಗದು ಬಹುಮಾನಗಳನ್ನು ವಿತರಿಸಲಾಯಿತು. ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ನೇರವೆರಿಸಲಾಯಿತು.
ಪ್ರಾಚಾರ್ಯರು ಎ.ಎಲ್.ಮುಲ್ತಾನಿ ಕಾರ್ಯಕ್ರಮದ ಎಲ್ಲ ಗಣ್ಯರನ್ನು ಸ್ವಾಗತಿಸಿದರು. ಶ್ರೀಮತಿ ಜಿ.ಬಿ. ಚೌಗಲಾ ಕಾರ್ಯಕ್ರಮವನ್ನು ನಿರೂಪಿಸಿದರು. ಜಿ.ಸಿ.ಹತ್ತರವಾಟ ಎಲ್ಲರನ್ನು ವಂದಿಸಿದರು.

Related posts: