ಗೋಕಾಕ:ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳಬೇಕು : ಸಂಧ್ಯಾ ಜಾರಕಿಹೊಳಿ
ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳಬೇಕು : ಸಂಧ್ಯಾ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 27 :
ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವಂತೆ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು.
ಶುಕ್ರವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ನಿಮಿತ್ಯ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿಜ್ಞಾನ ಇಂದು ದಿನನಿತ್ಯ ಬಳಕೆಯಾಗುತ್ತಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಆಸಕ್ತಿ ವಹಿಸಿ ಅದರ ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಕರು ವಿಜ್ಞಾನಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಿ ವಿದ್ಯಾರ್ಥಿಗಳ ಜ್ಞಾನ ಮಟ್ಟವನ್ನು ಹೆಚ್ಚಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ.ವಣ್ಣೂರ ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.