ಗೋಕಾಕ:ಪೇಜಾವರ ಮಠದ ಶ್ರೀಗಳ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಪೇಜಾವರ ಮಠದ ಶ್ರೀಗಳ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 29 :
ಉಡುಪಿ ಅಷ್ಠಮಠದ ಪೇಜಾವರ ಮಠದ ಯತಿ ಪರಂಪರೆಯಲ್ಲಿ 32ನೇ ಪೀಠಾಧಿಪತಿಗಳಾಗಿದ್ದ ವಿಶ್ವಸಂತ ವಿಶ್ವೇಶತೀರ್ಥ ಸ್ವಾಮೀಜಿಗಳ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಸ್ವಾಮೀಜಿಗಳ ನಿಧನದಿಂದ ಇಡೀ ದೇಶವೇ ದುಃಖ ಸಾಗರದಲ್ಲಿ ಮುಳುಗಿದೆ. ಇವರ ನಿಧನದಿಂದಾಗಿ ರಾಷ್ಟ್ರಕ್ಕೆ ಅಪಾರ ಹಾನಿಯಾಗಿದೆ. ಶ್ರೀಗಳ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಟ ಕೊಡುಗೆ ನೀಡಿದ್ದನ್ನು ಸ್ಮರಿಸಿಕೊಂಡ ಅವರು, ಅಷ್ಟ ಮಠಗಳಲ್ಲಿ ಒಂದಾಗಿರುವ ಉಡುಪಿ ಶ್ರೀಕೃಷ್ಣ ಪೇಜಾವರ ಮಠದ ಅಭಿವೃದ್ಧಿಗಾಗಿ ವಿಶಿಷ್ಟವಾಗಿ ಸೇವೆ ಸಲ್ಲಿಸುವ ಮೂಲಕ ಅಪಾರ ಸಂಖ್ಯೆಯ ಭಕ್ತ ವೃಂದವನ್ನು ಹೊಂದಿದ್ದರು. ರಾಷ್ಟ್ರದ ಮತ್ತೊಂದು ಅನಘ್ರ್ಯ ರತ್ನವನ್ನು ಕಳೆದುಕೊಂಡು ಇಡೀ ದೇಶವೇ ಬಡವಾಯಿತು ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕೆಂಬುದು ಶ್ರೀಗಳ ಕನಸಾಗಿತ್ತು. ಸುಪ್ರೀಂ ಕೋರ್ಟ ಸಹ ಅದೇ ತೀರ್ಪು ಈಗಾಗಲೇ ನೀಡಿದೆ. ಆದರೆ ರಾಮ ಮಂದಿರ ನೋಡಲು ಅವರಿಗೆ ಆಗಲಿಲ್ಲ. ಶ್ರೀಗಳ ಆತ್ಮಕ್ಕೆ ಚಿರಶಾಂತಿ ನೀಡುವಂತೆ ಪರಮಾತ್ಮನಲ್ಲಿ ಪ್ರಾರ್ಥಿಸುವುದಾಗಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.