RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ : ಲಖನ ಜಾರಕಿಹೊಳಿ

ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ : ಲಖನ ಜಾರಕಿಹೊಳಿ 

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ : ಲಖನ ಜಾರಕಿಹೊಳಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 29 :

 

 

ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ನೀಡಿ ದೇಶದ ಉತ್ತಮ ನಾಗರೀಕರನ್ನಾಗಿ ಮಾಡುವಂತೆ ಇಲ್ಲಿಯ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಚೇರಮನ್ ಲಖನ ಜಾರಕಿಹೊಳಿ ಹೇಳಿದರು.
ಶನಿವಾರದಂದು ಸಂಜೆ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಶಾಲೆಯ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.

ಇಂದಿನ ಸ್ಫರ್ದಾತ್ಮಕ ಯುಗದಲ್ಲಿ ತಮ್ಮ ಮಕ್ಕಳ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳ ಬಾಲವ್ಯವಸ್ಥೆಯಲ್ಲಿ ಅವರ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರು ನಿರ್ದಿಷ್ಠ ಗುರಿಯೊಂದಿಗೆ ಪ್ರತಿಭಾನ್ವಿತರಾಗಲು ಸೂಕ್ತ ಮಾರ್ಗದರ್ಶನದೊಂದಿಗೆ ಅವಕಾಶ ಕಲ್ಪಿಸಬೇಕು. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಕಲಿಕಾ ಮಟ್ಟವನ್ನು ಹೆಚ್ಚಿಸಬೇಕು. ಪಾಲಕರು ಶಿಕ್ಷಕರು ಹಾಗೂ ಸಂಸ್ಥೆ ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಿ ಮಕ್ಕಳ ಭವಿಷ್ಯವನ್ನು ಉಜ್ವಲ್‍ಗೊಳಿಸೋಣ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ ನಿಷೇಧ, ಪರಿಸರ ರಕ್ಷಣೆ, ದೇಶ ಭಕ್ತಿಯಂತಹ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ವೇದಿಕೆ ಮೇಲೆ ಸಂಸ್ಥೆಯ ಉಪಾಧ್ಯಕ್ಷೆ ಸಂಧ್ಯಾ ಲಖನ ಜಾರಕಿಹೊಳಿ, ಕಾರ್ಯದರ್ಶಿ ಸದಾನಂದ ಕಲಾಲ, ನಿರ್ದೇಶಕ ವಿನಾಯಕ ಚಿಪ್ಪಲಕಟ್ಟಿ, ಡಾ. ಭಾರತಿ ಮಠದ, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ಶಿಕ್ಷಕ ಎಮ್.ಸಿ.ವಣ್ಣೂರ ಇದ್ದರು.

Related posts: