ಘಟಪ್ರಭಾ: ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯ ಕಟ್ಟಡದ ಅಡಿಗಲ್ಲು ಸಮಾರಂಭ
ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯ ಕಟ್ಟಡದ ಅಡಿಗಲ್ಲು ಸಮಾರಂಭ
ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಜ 29 :
ಸ್ಥಳೀಯ ಜೆ.ಜಿ ಸಹಕಾರಿ ಆಸ್ಪತ್ರೆಯ ಆವರಣದಲ್ಲಿ ಸುಮಾರು 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಹುಬ್ಬಳ್ಳಿಯ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳು ಬುಧವಾರ ನೆರವೇರಿಸಿದರು.
ನಂತರ ಮಾತನಾಡಿದ ಅವರು ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ಸಂಸ್ಥೆ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಆಸ್ಪತ್ರೆ ಅಭಿವೃದ್ಧಿಯ ದೃಷ್ಠಿಯಿಂದ ಸುಮಾರ 24 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು, ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬಿ.ಆರ್.ಪಾಟೀಲ(ನಾಗನೂರ), ಉಪಾಧ್ಯಕ್ಷ ಎ.ಎನ್.ಕರಲಿಂಗನವರ, ನಿರ್ದೇಶಕರಾದ ಅಪ್ಪಯಪ್ಪಾ ಬಡಕುಂದ್ರಿ, ಚಂದ್ರಶೇಖರ ಕಾಡದವರ, ಸುರೇಶ ಕಾಡದವರ, ಆರ್.ಟಿ.ಶಿರಾಳಕರ, ಶಿವನಗೌಡಾ ಪಾಟೀಲ, ಎಸ್.ಎಂ.ಚಂದರಗಿ, ಬಿ.ಎಂ.ಬಂಡಿ, ಎಸ್.ಎಸ್.ದಳವಾಯಿ, ಆರ್.ಜೆ.ಪತ್ತಾರ, ಆಶಾದೇವಿ ಕತ್ತಿ, ಪೂಜಾ ಇನಾಮದಾರ, ಸಿಇಓ ಬಿ.ಕೆ.ಎಚ್ ಪಾಟೀಲ, ಮ್ಯಾನೇಜರ ಎಲ್.ಎಸ್.ಹಿಡಕಲ್ ಸೇರಿದಂತೆ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.