ಗೋಕಾಕ:ಯುವಕರು ದುಶ್ಚಟಗಳಿಗೆ ಬಲಿಯಾಗದೇ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು : ಲಖನ್ ಜಾರಕಿಹೊಳಿ
ಯುವಕರು ದುಶ್ಚಟಗಳಿಗೆ ಬಲಿಯಾಗದೇ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು : ಲಖನ್ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ, 12 :-
ಯುವಕರು ದುಶ್ಚಟಗಳಿಗೆ ಬಲಿಯಾಗದೇ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಸದಾ ಚಟುವಟಿಕೆಗಳಿಂದ ಕೂಡಿರಬೇಕು ಎಂದು ಕಾಂಗ್ರೆಸ್ ಮುಖಂಡ ಲಖನ ಜಾರಕಿಹೊಳಿ ಕಿವಿಮಾತು ಹೇಳಿದರು.
ಬುಧವಾರದಂದು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮೈದಾನದಲ್ಲಿ 5ನೇ ವರ್ಷದ “ಆದಿತ್ಯಾ ಟ್ರೋಫಿ” ಹಾಪ್ ಪಿಚ್ ಕ್ರಿಕೇಟ್ ಟೂರ್ನಾಮೆಂಟ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ಕ್ರಿಡೇಗಳಲ್ಲಿ ಪಾಲ್ಗೊಂಡು ಶಿಕ್ಷಣದಲ್ಲಿ ಮುಂದೆ ಬಂದರೆ ಸಮಾಜಕ್ಕೂ ಉತ್ತಮ ಮಾರ್ಗದರ್ಶಕರಾಗುತ್ತಾರೆ ಎಂದರಲ್ಲದೇ, ಯಾವುದೇ ಕ್ರೀಡೆಯನ್ನು ಕ್ರೀಡಾ ಮನೋಭಾವನೆಯಿಂದ ತೆಗೆದುಕೊಂಡು ಉತ್ತಮ ಪ್ರದರ್ಶನ ನೀಡಬೇಕು ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕ್ರಿಡೆಗಳಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದರೆ ನಮಗೂ ಪೆÇ್ರೀತ್ಸಾಹಿಸಲು ಆಸಕ್ತಿ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ಅಶೋಕ ಸಾಯನ್ನವರ್, ಪ್ರಕಾಶ ಮುರಾರಿ, ಬಸವರಾಜ ದೇಶನೂರ ಸೇರಿದಂತೆ ಇತರರು ಇದ್ದರು.