ಬೆಳಗಾವಿ:ಡಿಸಿಎಂ ಲಕ್ಷ್ಮಣ್ ಸವದಿ ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು
ಡಿಸಿಎಂ ಲಕ್ಷ್ಮಣ್ ಸವದಿ ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಫೆ 15
ಇಂದು ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಒಂದು ಸ್ಥಾನದ ಉಪ ಚುನಾವಣೆಗೆ ಮತದಾನ ನಡೆಯಿತು. ಬಿಜೆಪಿ ಅಭ್ಯರ್ಥಿಯಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಕಣದಲ್ಲಿ ಮಾತ್ರವೇ ಇದ್ರು. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಇಂದು ನಡೆದ ಪರಿಷತ್ ಉಪ ಚುನಾವಣೆಯ ಮತದಾನದಿಂದ ಹಿಂದೆ ಸರಿದ್ರು. ಹೀಗಾಗಿ ಬಿಜೆಪಿ ಲಕ್ಷ್ಮಣ್ ಸವದಿ ಅವಿರೋಧ ಆಯ್ಕೆಯಾಗಿದ್ದಾರೆ.
ಶಿವಾಜಿನಗರ ವಿಧಾನಸಭಾ ಉಪ ಚುನಾಣೆಗೆ ಸ್ಪರ್ಧಿಸಿ ಗೆದ್ದಿದ್ದಂತ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ಮೇಲ್ಮನೆ ಸ್ಥಾನಕ್ಕೆ ಇಂದು ಉಪ ಚುನಾವಣೆ ನಡೆಯಿತು. ಇಂತಹ ಉಪಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಸಿದ್ದರು. ಆದ್ರೇ ಕೊನೆಯ ಗಳಿಗೆಯಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಮತಪತ್ರದಲ್ಲಿ ಹೆಸರು ಮುದ್ರಣಗೊಂಡಿದ್ದರಿಂದ, ಇಂದು ಅನಿವಾರ್ಯವಾಗಿ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಮತದಾನ ನಡೆಯಿತು
ಇಂತಹ ಮತದಾನದಲ್ಲಿ ಬಿಜೆಪಿಯ ಬಹುತೇಕರು ಭಾಗವಹಿಸಿ ಮತವನ್ನು ಚಲಾಯಿಸಿದ್ರು. ಆದ್ರೇ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸದೇ ಇದ್ದಕಾರಣ ಮತದಾನದಿಂದ ಹಿಂದೆ ಸರಿದಿತ್ತು. ಹೀಗಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪ್ರಚಂಡ ಗೆಲುವನ್ನು ಸಾಧಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿಎಂ ಲಕ್ಷ್ಮಣ್ ಸವದಿ, ವಿಧಾನ ಪರಿಷತ್ ಚುನಾವಣೆಗೆ ತಮ್ಮನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೇ ಭಾರತೀಯ ಜನತಾ ಪಾರ್ಟಿಯಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಧನ್ಯವಾದಗಳನ್ನು ಹೇಳಿದ್ದಾರೆ.