ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :
ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ ಸ್ಥಳ ಖಾನಾಪೂರದ ಕಣಕುಂಬಿಗೆ ಭೇಟಿ ನೀಡಲಿದ್ದಾರೆ. ಮಹಾದಾಯಿ ಯೋಜನೆ ಕಳಸಾ-ಬಂಡೂರಿ ನಾಲಾ ಕಾಮಗಾರಿ ಅತಿಶೀಘ್ರದಲ್ಲೆ ಕೈಗೆತ್ತಿಕೊಳ್ಳಲು ತಯಾರಿ ನಡೆಸಿದ್ದಾರೆ.
ಕಳೆದ ದಶಕಗಳಿಂದ ನೆನೆಗುದಿಗೆ ಬಿದ್ದ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳಲು ಜಲಸಂಪನ್ಮೂಲ ಸಚಿವರು ಉತ್ಸುಕರಾಗಿದ್ದು ಉತಯ ಕರ್ನಾಟಕದ ಸಾರ್ವಜನಿಕರ ಮೆಚ್ಚುಗೆ ಪಾತ್ರರಾಗಿದ್ದಾರೆ.