RNI NO. KARKAN/2006/27779|Thursday, December 12, 2024
You are here: Home » breaking news » ಬೆಟಗೇರಿ:ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ

ಬೆಟಗೇರಿ:ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ 

ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ

 

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 28 :

 

 

ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯರವಂಕಿ ತೋಟದ ರಸ್ತೆ ನಿರ್ಮಾಣದ ಕಾಮಗಾರಿ ನಡೆದ ಸ್ಥಳಕ್ಕೆ ಗುರುವಾರ ಫೆ.27 ರಂದು ಭೇಟಿ ನೀಡಿ ರಸ್ತೆ ನಿರ್ಮಾಣ ಕೆಲಸ ವೀಕ್ಷಿಸಿ ಮಾತನಾಡಿದ ಅವರು, ಸ್ಥಳೀಯ ತಾಪಂ ಸದಸ್ಯರ ಅನುದಾನದಡಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಬೆಟಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅಗತ್ಯವಾಗಿದೆ ಎಂದರು.
ಈ ವೇಳೆ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗುರಪ್ಪ ದೇಯಣ್ಣವರ, ಹಾಲಪ್ಪ ಕೋಣಿ, ಶಿವಪ್ಪ ಕುಳಲಿ, ಬಸವರಾಜ ನೀಲಣ್ಣವರ, ಸುರೇಶ ಬಾಣಸಿ, ಪತ್ರೇಪ್ಪ ದೇಯಣ್ಣವರ, ವಿಠಲ ಚಂದರಗಿ, ಗ್ರಾಪಂ ಸದಸ್ಯರು, ಇಲ್ಲಿಯ ಯರವಂಕಿ ತೋಟದ ರಸ್ತೆ ಹಿರಿಯ ನಾಗರಿಕರು, ಗ್ರಾಮಸ್ಥರು, ಗ್ರಾಪಂ ಸಿಬ್ಬಂದಿ, ಇತರರು ಇದ್ದರು.

Related posts: