ಬೆಟಗೇರಿ:7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ
7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮಾ 14 :
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ಶುಕ್ರವಾರ ಮಾ.13 ರಂದು ನಡೆಯಿತು.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು. ಈರಯ್ಯ ಹಿರೇಮಠ ಸಾನಿಧ್ಯ ವಹಿಸಿ ಮಾತನಾಡಿದರು. ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಲಯದಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಗಣ್ಯರ ಸತ್ಕಾರದ ಬಳಿಕ ಶಾಲಾ ಮಕ್ಕಳಿಂದ ಭಾಷಣ, ಸಾಂಸ್ಕøತೀಕ ಮನರಂಜನೆಯ ಕಾರ್ಯಕ್ರಮಗಳು ನಡೆದವು.
ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಸಿಆರ್‍ಸಿ ಬಿ.ಟಿ.ಪುಂಜಿ, ಮಾಲತೇಶ ಸಣ್ಣಕ್ಕಿ, ಆರ್.ಬಿ.ಬೆಟಗೇರಿ, ಎಚ್.ಬಿ.ಪಾಟೀಲ, ಮಲ್ಲಪ್ಪ ಪಣದಿ, ರಾಮಚಂದ್ರ ಬಡಿಗೇರ, ಜೆ.ಎಂ.ನದಾಫ್, ಮಹಾದೇವ ಹಾದಿಮನಿ, ದುಂಡಪ್ಪ ಕಂಬಿ, ರಾಜು ಪತ್ತಾರ, ಎಸ್‍ಡಿಎಮ್‍ಸಿ ಅಧ್ಯಕ್ಷರಾದ ರಮೇಶ ನೀಲಣ್ಣವರ, ಉದ್ದಪ್ಪ ಚಂದರಗಿ, ಸದಸ್ಯರು, ಶಿಕ್ಷಕರು, ಗ್ರಾಮದ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಣ ಪ್ರೇಮಿಗಳು, ಇತರರು ಇದ್ದರು.