RNI NO. KARKAN/2006/27779|Friday, November 22, 2024
You are here: Home » breaking news » ಗೋಕಾಕ:ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ

ಗೋಕಾಕ:ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ 

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಸಿಎಂಗೆ ಮನವಿ

 

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮಾ 17 :

 

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಸುವಂತೆ ಆಗ್ರಹಿಸಿ ಇಲ್ಲಿನ ಲಿಂಗಾಯತ ಧರ್ಮ ಹೋರಾಟಗಾರ ಉದಯ ಕರಜಗಿಮಠ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು .

ಮಂಗಳವಾರ ಏಕಾಂಗಿಯಾಗಿ ತಹಶೀಲ್ದಾರ್ ಕಾರ್ಯಾಲಯಕ್ಕೆ ಆಗಮಿಸಿ ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ ಅವರ ಮುಖೇನ ಸರಕಾರಕ್ಕೆ ಮನವಿ ಸಲ್ಲಿಸಿದರು .

ಕರ್ನಾಟಕದಲ್ಲಿ ಲಿಂಗಾಯತ ಸಮುದಾಯಕ್ಕೆ ಈಗಾಗಲೇ ರಾಜ್ಯ ಸರ್ಕಾರದಿಂದ ಅಲ್ಪ ಸಂಖ್ಯಾತ ಧರ್ಮ ವೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಲಿಂಗಾಯತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ” ಲಿಂಗಾಯತ ಅಭಿವೃದ್ಧಿ ನಿಗಮ “ಸ್ಥಾಪನೆ ಮಾಡುವ ಮುಖಾಂತರ ಅಖಂಡ ಲಿಂಗಾಯತ ಸಮುದಾಯದ ಬೇಡಿಕೆಯನ್ನು ಈಡೇರಿಸಿದಂತಾಗುತ್ತದೆ.
ಈಗಾಗಲೇ ಮಹಾರಾಷ್ಟ್ರ ದಲ್ಲಿ ಮರಾಠಾ ಸಮುದಾಯವು ಅಲ್ಪ ಸಂಖ್ಯಾತರೆಂದು ಪರಿಗಣಿಸಿ ಮೀಸಲಾತಿ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿರುವ ಅಖಂಡ ಲಿಂಗಾಯತ ಸಮುದಾಯಕ್ಕೆ ಇಲ್ಲಿಯ ಸರ್ಕಾರವು ಯವುದೇ ಆದ್ಯತೆ ನೀಡದೆ ವಂಚಿಸುತ್ತಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದಲ್ಲಿ ನೂರಾರು ಒಳಪಂಗಡಗಲ್ಲಿದ್ದು ನಮ್ಮ ಸಮಾಜದ ಯುವಕರು ಉದ್ಯೋಗವಿಲ್ಲದೇ ಸರಿಯಾದ ಶಿಕ್ಷಣವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಡಜನತೆಗೆ ಸರ್ಕಾರದ ಯೋಜನೆಗಳು ಸರಿಯಾಗಿ ಸಿಗದೇ ಸಮಸ್ಯೆ ಎದುರಿಸುವಂತಾಗಿದೆ. ಆದ್ದರಿಂದ ರಾಜ್ಯದಲ್ಲಿ ಅಖಂಡ ಲಿಂಗಾಯತ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಮಾನ್ಯ ಮುಖ್ಯ ಮಂತ್ರಿ ಯಡಿಯೂರಪ್ಪನವರು ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿ ಉದ್ಯೋಗ ಮತ್ತು ಶಿಕ್ಷಣ ಹಾಗೂ ಇತರೆ ಸೌಲಭ್ಯಕ್ಕಾಗಿ ಮೀಸಲಾತಿಯನ್ನು ನೀಡಿ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ

Related posts: