ಬೆಟಗೇರಿ:ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ತಪ್ಪದೇ ಮಾಸ್ಕ್ ಧರಿಸಬೇಕು : ಡಾ.ರಾಜೇಂದ್ರ ಸಣ್ಣಕ್ಕಿ
ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ತಪ್ಪದೇ ಮಾಸ್ಕ್ ಧರಿಸಬೇಕು : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮಾ 29 :
ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ತಪ್ಪದೇ ಮಾಸ್ಕ್ ಧರಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು ಎಂದು ಸ್ಥಳೀಯರಿಗೆ ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಮೆಳವಂಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೆಟಗೇರಿ ಗ್ರಾಮಕ್ಕೆ ಸೋಮವಾರ ಮಾ.30ರಂದು ಭೇಟಿ ನೀಡಿದ ಅವರು, ಕರೊನಾ ವೈರಸ್ ತಡೆಗಟ್ಟಲು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದ ಬಳಿಕ ಮಾತನಾಡಿ, ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಗ್ರಾಪಂ ಮತ್ತು ಪಿಎಚ್‍ಸಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಮೆಳವಂಕಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟು ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದು ಸ್ಥಳೀಯ ಸಾರ್ವಜನಿಕರ ಸ್ಥಿತಿಗತಿಗಳ ಕುರಿತು ಗ್ರಾಪಂ ಪಿಡಿಒ, ಅಧ್ಯಕ್ಷ-ಸದಸ್ಯರು ಹಾಗೂ ಪಿಎಚ್‍ಸಿ ವೈದ್ಯಾಧಿಕಾರಿಗಳ ಜೋತೆ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಯುವ ಮುಖಂಡ ಲಕ್ಕಪ್ಪ ಲೊಕೂರ ಅವರು ಚರ್ಚಿಸಿದರು.
ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ ಯುವ ಮುಖಂಡ ಲಕ್ಕಪ್ಪ ಲೊಕೂರ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಪಿಎಚ್‍ಸಿ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ, ಸುಭಾಷ ಕರೆಣ್ಣವರ, ಪ್ರಕಾಶ ಹಾಲಣ್ಣವರ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂ, ಪಿಎಚ್‍ಸಿ ಸಿಬ್ಬಂದಿ ಮತ್ತೀತರರು ಇದ್ದರು.