RNI NO. KARKAN/2006/27779|Thursday, December 12, 2024
You are here: Home » breaking news » ಬೆಟಗೇರಿ:ಎಲ್ಲರೂ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು : ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ

ಬೆಟಗೇರಿ:ಎಲ್ಲರೂ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು : ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ 

ಎಲ್ಲರೂ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು : ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ

 

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಎ 3 :

 

 

ಗ್ರಾಮದ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸುವಂತೆ ಸ್ಥಳೀಯರಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಕೊರನಾ ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಕ್ಕೆ ಶುಕ್ರವಾರ ಏ.3ರಂದು ಭೇಟಿ ನೀಡಿದ ಅವರು ಸ್ಥಳೀಯ ಗ್ರಾಪಂ ಮತ್ತು ಪಿಎಚ್‍ಸಿ ಅವರ ಸಹಯೋಗದಲ್ಲಿ ಕರೋನಾ ಹರಡದಂತೆ ತಡೆಗಟ್ಟುವ ಕುರಿತು ಆಯೋಜಿಸಿದ ವಿವಿಧ ಮಾಹಿತಿ ಪಡೆದ ಬಳಿಕ ಮಾತನಾಡಿ, ಪ್ರತಿಯೊಬ್ಬರಿಗೂ ಜೀವವಿದ್ದರೆ ಜೀವನ, ಕರೋನಾ ಬಗ್ಗೆ ಭಯಪಡಬೇಡಿ, ಮನ್ನೆಚ್ಚರಿಕೆ ವಹಿಸಿ ಎಂದರು.
ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟು ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು, ಸ್ಥಳೀಯ ಸಾರ್ವಜನಿಕರ ಸ್ಥಿತಿಗತಿ, ಹಲವು ಸೌಲಭ್ಯಗಳ ಕೊರತೆ, ಸಮಸ್ಯೆಗಳ ಕುರಿತು ಗ್ರಾಪಂ ಪಿಡಿಒ, ಅಧ್ಯಕ್ಷ-ಸದಸ್ಯರು ಹಾಗೂ ಪಿಎಚ್‍ಸಿ ವೈದ್ಯಾಧಿಕಾರಿ, ಸಿಬ್ಬಂದಿ ಜೋತೆ ಬೆಟಗೇರಿ ಗ್ರಾಪಂ ಕರೊನಾ ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ ಚರ್ಚಿಸಿದರು.
ಬಾಕ್ಸ್ ಐಟಮ್: ಜನ ಜಾಗ್ರತಿ ಕಾರ್ಯಕ್ಕೆ ಮೆಚ್ಚುಗೆ: ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕರೊನಾ ವೈರಸ್ ನಿಯಂತ್ರಣಾ ಕ್ರಮಗಳ ಕುರಿತು ವಿವಿಧ ಕಾರ್ಯಕ್ರಮಗಳಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜೋತೆ ವೈದ್ಯಕೀಯ ಶಿಕ್ಷಣದ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳು, ಕರವೇ ಗ್ರಾಮ ಘಟಕದ ಪದಾಧಿಕಾರಿಗಳು, ಸದಸ್ಯರು, ಟಾಸ್ಕ್ ಪೊರ್ಸ್ ಸಮಿತಿ ಸದಸ್ಯರು ಸ್ವಯಂ ಪ್ರೇರಿತರಾಗಿ ಕ್ರೀಯಾಶೀಲ ವ್ಯಕ್ತಿತ್ವ ಮೂಲಕ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ಕೆ ಈ ವೇಳೆ ಕರೊನಾ ನೋಡಲ್ ಅಧಿಕಾರಿ ಜಿ.ಬಿ.ಬಳಿಗಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್, ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಪಿಎಚ್‍ಸಿ ರಕ್ತ ಪರೀಕ್ಷಕಿ ಸರೋಜಾ ಮಟಗಿ, ಸುರೇಶ ಬಾಣಸಿ, ಪರಸರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಶ್ರೀಧರ ದೇಯಣ್ಣವರ, ಬಸವರಾಜ ಪಣದಿ, ಗ್ರಾಪಂ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಶಿಕ್ಷಣದ ವಿವಿಧ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳು, ಕರವೇ ಗ್ರಾಮ ಘಟಕದ ಪದಾಧಿಕಾರಿಗಳು, ಸದಸ್ಯರು, ಟಾಸ್ಕ್ ಪೊರ್ಸ್ ಸಮಿತಿ ಸದಸ್ಯರು, ಗ್ರಾಪಂ ಮತ್ತು ಪಿಎಚ್‍ಸಿ ಸಿಬ್ಬಂದಿ ಸಿಬ್ಬಂದಿ, ಮತ್ತೀತರರು ಇದ್ದರು.

Related posts: